ಕೇರಳದಲ್ಲಿ ಬಿಜೆಪಿ ಮುಖಂಡನ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

22 smg 10
Published on

ಶಿವಮೊಗ್ಗ: ಕೇರಳ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಶ್ರೀನಿವಾಸನ್ ಹಾಗೂ ಅವರ ಕುಟುಂಬದವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದನ್ನು ಖಂಡಿಸಿ ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಬುಧವಾರ ನಗರದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶ್ರೀನಿವಾಸನ್ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಬ್ಬರು ಮಕ್ಕಳು ಹಾಗೂ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಸ್ವಾತಂತ್ರೃ ಭಾರತದಲ್ಲಿ ಇದು ಅತ್ಯಂತ ಹೇಯ ಕೃತ್ಯವಾಗಿದೆ. ಪ್ರಜಾಪ್ರಭುತ್ವದಲ್ಲಿ ವಿಶ್ವಾಸವಿಲ್ಲದ ಭಯೋತ್ಪಾದಕ ಮನಸ್ಥಿತಿಯ ಮಂದಿ ಈ ಕೆಲಸ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಾಲತೇಶ್, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಶಿವಮೊಗ್ಗ ನಗರ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ನಾಗರಾಜ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net