

ಮೈಸೂರು: ಕೊಲೆ ಪ್ರಕರಣ ಭೇದಿಸಿರುವ ಜಿಲ್ಲಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜಯಪುರ ಹೋಬಳಿಯ ಕೇರ್ಗಳ್ಳಿ ಗ್ರಾಮದ ನಿವಾಸಿ ಮಹದೇವ ಅವರ ಶವ ಸೆ.11ರಂದು ಕೇರ್ಗಳ್ಳಿಯ ಹೊರಭಾಗದ ಜಮೀನಿನಲ್ಲಿ ಪತ್ತೆಯಾಗಿತ್ತು.
ಈ ಸಂಬಂಧ ಮಹದೇವ ಪತ್ನಿ ಲಕ್ಷ್ಮಮ್ಮ ‘ಪತಿ ಸೆ.9 ರಂದು ಮನೆಯಿಂದ ಹೋದವರು ಶವವಾಗಿ ಪತ್ತೆಯಾಗಿದ್ದಾರೆ. ಯಾರೋ ದುಷ್ಕರ್ಮಿಗಳು ಕತ್ತನ್ನು ಕೊಯ್ದು ಕೊಲೆ ಮಾಡಿದ್ದಾರೆ’ ಎಂದು ನೀಡಿದ್ದ ದೂರನ್ನು ದಾಖಲಿಸಿಕೊಂಡ ಜಯಪುರ ಪೊಲೀಸರು, ತನಿಖೆ ಕೈಗೊಂಡು ಮಂಗಳವಾರ ಆರೋಪಿಯನ್ನು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.