ಬೈಕ್​ ಡಿಕ್ಕಿಯಾಗಿ ಪಾದಚಾರಿ ಸಾವು

Crime Logo
Published on

ರಾಣೆಬೆನ್ನೂರ: ಬೈಕ್​ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೆರಿಮಲ್ಲಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ.

ವಿರುಪಾಕ್ಷಪ್ಪ ಮಲಕಪ್ಪ ಹ್ಯಾಡಲರ ಮೃತ ವ್ಯಕ್ತಿ.

ಈತ ಗ್ರಾಮದ ಬಳಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬೈಕ್​ವೊಂದು ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ವಿರುಪಾಕ್ಷಪ್ಪ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net