

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ನಡೆಸಿದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆ-ಟಿಇಟಿ)ಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಿದೆ.
ಅ.4ರಂದು ನಡೆದ ಕೆ-ಟಿಇಟಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಅ.12ರಂದು ಪ್ರಕಟಿಸಲಾಗಿತ್ತು. ಕೀ ಉತ್ತರಗಳಿಗೆ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಿದ್ದರು. ಆಕ್ಷೇಪಣೆಗಳನ್ನು ವಿಷಯ ತಜ್ಞರ ಮೂಲಕ ಪರಿಶೀಲಿಸಿ, ಪರಿಗಣಿಸಬಹುದಾದ ಆಕ್ಷೇಪಣೆಗಳನ್ನು ಪರಿಗಣಿಸಿ, ಪರಿಷ್ಕೃತ ಕೀ ಉತ್ತರಗಳನ್ನು ಇಲಾಖೆ ಪ್ರಕಟಿಸಿದೆ.
ಅಭ್ಯರ್ಥಿಗಳು ಈಗ ತಮ್ಮ ಉತ್ತರಗಳೊಂದಿಗೆ ಪರಿಶೀಲಿಸಿಕೊಳ್ಳಬಹುದು ಎಂದು ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.