

ಕೆಜಿಎಫ್:ನಗರದ ಎಂ.ಜಿ. ಮಾರುಕಟ್ಟೆಯಲ್ಲಿ ದನದ ಮಾಂಸ ಮಾರಾಟ ಮಾಡುವ ಅಂಗಡಿ ಮಾಲೀಕರು ಅಂಗಡಿ ಮುಂಭಾಗದಲ್ಲಿ ಮಟನ್ ಕತ್ತರಿಸುವುದರಿಂದ ಅದರ ರಕ್ತವೆಲ್ಲ ರಸ್ತೆಯಲ್ಲಿ ಹರಿದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಇದರಿಂದ ಪರಿಸರವೂ ಹಾಳಾಗುತ್ತಿದೆ ಎಂದು ಸಾರ್ವಜನಿಕರು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಎಂಜಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು. ಅಂಗಡಿ ಮಾಲೀಕರು ರಸ್ತೆ ಮುಂಭಾಗದಲ್ಲಿ ದನದ ಮಾಂಸ ಕಟಾವು ಮಾಡುತ್ತಿರುವುದು ಕಂಡುಬಂದಿದ್ದು, ಇದು ತಪ್ಪು ಎಂದು ಮನವರಿಕೆ ಮಾಡಿಕೊಟ್ಟು ಅಂಗಡಿಗಳನ್ನು ಬಂದ್ ಮಾಡಿಸಿದರು. ಕಟಾವು ಮಾಡಿದ್ದ ದನದ ಮಾಂಸವನ್ನು ನಗರಸಭೆ ಸಿಬ್ಬಂದಿ ವಶಪಡಿಸಿಕೊಂಡರು.