ಯುವಕನ ಕೈ ಕಡಿದ ಪ್ರಕರಣಕ್ಕೆ ಖಂಡನೆ

24-kollegal-6,,
Published on

ಕೊಳ್ಳೇಗಾಲ: ಉಪ ಮುಖ್ಯಮಂತ್ರಿಗಳ ಸ್ವಕ್ಷೇತ್ರ ಕನಕಪುರದ ಸಮೀಪದ ಮಾಳಗಾಳು ಗ್ರಾಮದಲ್ಲಿ ದಲಿತ ಯುವಕನ ಮುಂಗೈ ಕಡಿದಿರುವ ಪ್ರಕರಣ ಖಂಡಿಸಿ ಬುಧವಾರ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ತಾಲೂಕು ಬಿ.ಆರ್.ಅಂಬೇಡ್ಕರ್ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.
ಪ್ರತಿಮೆ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾಕಾರರು, ರಾಮನಗರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಧಿಕ್ಕಾರ ಮೊಳಗಿಸಿದರು.
ಈ ವೇಳೆ ಮುಖಂಡ ಶೇಖರ್ ಮಾತನಾಡಿ, ಮಾಳವಾಳು ಗ್ರಾಮದಲ್ಲಿ ಜು.21 ರಂದು ದಲಿತರ ಬಡಾವಣೆಗೆ ನುಗ್ಗಿ ದೌರ್ಜನ್ಯ ಎಸಗಿದ್ದಾರೆ. ಈ ವೇಳೆ ವೈರ ಮುಡಿಯವರ ಪುತ್ರ ಅನೀಶ್ ಎಂಬಾತನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಲಾಗಿದೆ. ಆತನ ಮುಂಗೈ ಕಡಿದು ಹಾಕಲಾಗಿದೆ. ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಮಾಡಲಾಗಿದೆ. ಈ ಅಮಾನವೀಯ ಕೃತ್ಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣುಕಿಸುವಂತಿದೆ. ರೌಡಿ ಶೀಟರ್ ಆಗಿ ಗಡಿಪಾರಾಗಿದ್ದ ಹರ್ಷ ಅಲಿಯಾಸ್ ಕೈಮಾ ಎಂಬಾತ ತನ್ನ ಸಹಚರರ ಜತೆಗೂಡಿ ಹಲ್ಲೆ ನಡೆಸಿದ್ದಾನೆ. ಸಿಎಂ ಸಿದ್ದರಾಮಯ್ಯ ಹಾಗೂ ರಾಮನಗರ ಜಿಲ್ಲಾಡಳಿತ 1 ವಾರದೊಳಗೆ ಈ ಬಗ್ಗೆ ಪರಿಶೀಲಿಸಿ ತಪಿಸ್ಥರಿಗೆ ಕಾನೂನು ಕ್ರಮ ಜರುಗಿಸದಿದ್ದರೆ ಕೊಳ್ಳೇಗಾಲದಿಂದ ಕನಕಪುರ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿ ಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net