ಮಾಜಿ ಸಂಸದರ ಪತ್ನಿಯ ಸರ ಕಿತ್ತುಕೊಂಡ ಹೋದ ಖದೀಮ

6 SRS
Published on

ಶಿರಸಿ: ಶಿರಸಿಯಲ್ಲಿರುವ ಮಾಜಿ ಸಂಸದ ದೇವರಾಯ ನಾಯ್ಕ ಮನೆಗೆ ಹಾಡುಹಗಲೇ ಅಪರಿಚಿತನೊಬ್ಬ ನೀರು ಕೇಳುವ ನೆಪದಲ್ಲಿ ಬಂದು ಬಂಗಾರದ ಸರ ಕಿತ್ತುಕೊಂಡು ಹೋದ ಆತಂಕಕಾರಿ ಘಟನೆ ಬುಧವಾರ ಜರುಗಿದೆ.

ನಗರದ ಯಲ್ಲಾಪುರ ನಾಕಾದಲ್ಲಿರುವ ಮಾಜಿ ಸಂಸದರ ಮನೆಯಲ್ಲಿ ಅವರ ಪತ್ನಿ ಗೀತಾ ನಾಯ್ಕ ಒಬ್ಬರೇ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳುವ ನೆಪ ಮಾಡಿಕೊಂಡು ಬಂದು ಅವರ ಕುತ್ತಿಗೆಯಲ್ಲಿದ್ದ ಸರವನ್ನು ಕಿತ್ತುಕೊಂಡು ಹೋಗಿದ್ದಾನೆ.

ಅಂದಾಜು 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಸರವನ್ನು ಕಿತ್ತುಕೊಂಡು ಹೋಗಿದ್ದಾನೆ. ವಿಷಯ ತಿಳಿದ ತಕ್ಷಣ ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ದೇವರಾಯ ಅವರ ಮಗ ನಾಗರಾಜ ನಾಯ್ಕ ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ಮಾಜಿ ಸಂಸದರ ಮನೆಗೆ ಮಾರುಕಟ್ಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಆರೋಪಿಯನ್ನು ಹಿಡಿಯಲು ಕ್ರಮ ಕೈಗೊಂಡಿದ್ದಾರೆ. ಆದರೆ, ಮನೆಗೆ ಸಿಸಿಟಿವಿ ಇಲ್ಲದೆ ಇರುವುದು ಸಮಸ್ಯೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net