ಖರ್ಗೆ ರಾಜೀನಾಮೆಗೆ ಆಗ್ರಹ

31Huk3
Published on

ಹುಕ್ಕೇರಿ: ಶ್ರೀ ರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕೊಲೆಗೆ ಸಂಚು ರೂಪಿಸಿದ ವ್ಯಕ್ತಿಯನ್ನು ಬಂಧಿಸಬೇಕು. ಸಚಿವ ಪ್ರಿಯಾಂಕ ಖರ್ಗೆ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತಾಲೂಕು ರಾಮಸೇನಾ ಘಟಕ ವತಿಯಿಂದ ಪಟ್ಟಣದಲ್ಲಿ ಗ್ರೇಡ್-2 ತಹಸೀಲ್ದಾರ್ ಪ್ರಕಾಶ ಕಲ್ಲೋಳಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಶ್ರೀ ರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕೊಲೆ ಸಂಚು, ಸಚಿವ ಪ್ರಿಯಾಂಕ ಖರ್ಗೆ ಅವರ ಆಪ್ತ ರಾಜು ಕಪನೂರ ಕೃತ್ಯದ ಬಗ್ಗೆ ಈಚೆಗೆ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ. ಸಿದ್ಧಲಿಂಗ ಸ್ವಾಮೀಜಿಗೆ ರಕ್ಷಣೆ ಒದಗಿಸಿ, ಕೊಲೆಗೆ ಸಂಚು ರೂಪಿಸಿದ ವ್ಯಕ್ತಿ ಬಂಧಿಸಬೇಕು ಎಂದು ಒತ್ತಾಯಿಸಿದರು. ಶಿವರಾಜ ಅಂಬಾರಿ, ವಿವೇಕ ಪುರಾಣಿಕ, ರಾಹುಲ ಅಂಕಲೆ, ವಿಠ್ಠಲ ಹೆಗಡೆ, ಮಾರುತಿ ಬೆನ್ನಾಡಿ, ಅಜಿತ ರಾಣಿಕನ್ನವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net