ಆರ್​ಎಸ್​ಎಸ್ ಹೊಗಳಿದ್ದ ಖರ್ಗೆ ಈಗ ಯೂ ಟರ್ನ್

MLA Mahesh Tenginakayi
Published on

ಹುಬ್ಬಳ್ಳಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾಜುನ ಖರ್ಗೆ ಈ ಹಿಂದೆ ಕರ್ನಾಟಕದ ಗೃಹ ಸಚಿವರಾಗಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್​ಎಸ್​ಎಸ್)ದ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸಂಘದ ಚಟುವಟಿಕೆಗಳನ್ನು ಹಾಡಿ ಹೊಗಳಿದ್ದರು. ಈಗ ಆರ್​ಎಸ್​ಎಸ್ ನಿಷೇಧಿಸುವ ತಮ್ಮ ಪುತ್ರ ಪ್ರಿಯಾಂಕ್ ಖರ್ಗೆ ಮಾತಿಗೆ ಬೆಂಬಲ ವ್ಯಕ್ತಪಡಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್​ಎಸ್​ಎಸ್ ನಿಷೇಧಿಸಬೇಕೆಂಬ ಸಚಿವ ಪ್ರಿಯಾಂಕ್ ಖರ್ಗೆಗೆ ಯಾರೂ ಬೆಂಬಲ ನೀಡುತ್ತಿಲ್ಲ. ಹೀಗಾಗಿ, ಅನಿವಾರ್ಯವಾಗಿ ಪುತ್ನ ಸಹಾಯಕ್ಕೆ ಮಲ್ಲಿಕಾರ್ಜುನ ಖರ್ಗೆ ಬಂದಿದ್ದಾರೆ ಎಂದು ಟೀಕಿಸಿದರು.

ರಜಾಕರ ಹಾವಳಿ ಸಮಯದಲ್ಲಿ ಆರ್​ಎಸ್​ಎಸ್ ಮಾಡಿರುವ ಕೆಲಸದ ಬಗ್ಗೆ ನೆನಪಿರಲಿ ಎಂದರು. ಮನೆಯೊಂದು ಮೂರು ಬಾಗಿಲು ಆಗಿರುವ ಕಾಂಗ್ರೆಸ್, ಜನರ ಮನಸ್ಸು ಬೇರೆಡೆ ಸೆಳೆಯುವ ಉದ್ದೇಶದಿಂದ ಆರ್​ಎಸ್​ಎಸ್ ನಿಷೇಧದ ಬಗ್ಗೆ ಮಾತನಾಡುತ್ತಿದೆ. ಇದನ್ನು ಬಿಟ್ಟು ಧೈರ್ಯ ಇದ್ದರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಿಸಲಿ ಎಂದು ಸವಾಲು ಹಾಕಿದರು.

ಬಿಜೆಪಿಯಲ್ಲಿ ಯಾರೂ ರೇಬಲ್ ಇಲ್ಲ. ನಮ್ಮಲ್ಲಿ ಯಾವುದೇ ಭಿನ್ನಮತವೂ ಇಲ್ಲ. ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net