ಎಂಐಟಿ ಕಾಲೇಜಿನಲ್ಲಿ ಖೋ ಖೋ ಪಂದ್ಯಾವಳಿ

njd news 2
ನಂಜನಗೂಡು ಸಮೀಪದ ತಾಂಡವಪುರ ಬಳಿ ಇರುವ ಎಂಐಟಿ ಕಾಲೇಜಿನಲ್ಲಿ ಖೋ ಖೋ ಪಂದ್ಯಾವಳಿಯನ್ನು ಪ್ರಾಂಶುಪಾಲ ವೈ.ಟಿ. ಕೃಷ್ಣೇಗೌಡ ಉದ್ಘಾಟಿಸಿದರು. ಕಾಲೇಜಿನ ಉಪನ್ಯಾಸಕರು ಇದ್ದರು.
Published on

ನಂಜನಗೂಡು: ತಾಲೂಕಿನ ತಾಂಡವಪುರ ಗ್ರಾಮದ ಬಳಿ ಇರುವ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ ಹಾಗೂ ಎಂಐಟಿ ಕಾಲೇಜು ಸಹಯೋಗದೊಂದಿಗೆ ಇತ್ತೀಚೆಗೆ ಖೋ ಖೋ ಪಂದ್ಯಾವಳಿ ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲ ವೈ.ಟಿ.ಕೃಷ್ಣೇಗೌಡ ಅವರು ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳು ಶಿಕ್ಷಣದ ಜತೆಗೆ ಕ್ರೀಡೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಮಹಾರಾಜ ತಾಂತ್ರಿಕ ವಿದ್ಯಾಲಯ ಅಂತಾರಾಷ್ಟ್ರೀಯ ಮಟ್ಟದ ಕಾಲೇಜಾಗಿದ್ದು, ಸಿವಿಲ್ ಇಂಜಿನಿಯರ್ ಮತ್ತು ಮೆಕಾನಿಕಲ್ ಇಂಜಿನಿಯರ್‌ನಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ ಎಂದರು.

ಪಂದ್ಯಾವಳಿಯಲ್ಲಿ ಡಾ.ಮುರಳಿಧರ್, ಡಾ.ಚೇತನ್, ಡಾ.ರಕ್ಷಿತ್, ಆಲ್ವಿನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net