ಅಪಹರಣ, ಸುಲಿಗೆ ಕೇಸ್, ಮಹಿಳೆ ಸಹಿತ ಇಬ್ಬರ ಸೆರೆ

Arrest
Published on

ಕುಂದಾಪುರ: ಮೊಬೈಲ್ ಶಾಪ್ ಮಾಲೀಕನನ್ನು ಅಪಹರಿಸಿ 4.64 ಲಕ್ಷ ರೂ. ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಕೋಟೇಶ್ವರ ಮೂಲದ ಮುಖ್ತಾರ್(35) ಪ್ರಕರಣದ ಪ್ರಮುಖ ಆರೋಪಿ. ಈತನೊಂದಿಗೆ ದೆಹಲಿ ಮೂಲದ 25ರ ಹರೆಯದ ಯುವತಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇನ್ನೂ ಮೂವರು ಭಾಗಿಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಆರೋಪಿಗಳು ದೆಹಲಿಯಲ್ಲಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿದ್ದರು, ಅಷ್ಟರಲ್ಲಾಗಲೇ ಆರೋಪಿಗಳು ಪರಾರಿಯಾಗಲೆತ್ನಿಸಿದ್ದಾರೆ, ಕಾರೊಂದನ್ನು ಬಾಡಿಗೆ ಪಡೆದ ಪೊಲೀಸರು ಆರೋಪಿಗಳನ್ನು ಬೆನ್ನಟ್ಟಿ ಅಹಮದಾಬಾದ್‌ನಲ್ಲಿ ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಶುಕ್ರವಾರ ಕುಂದಾಪುರಕ್ಕೆ ಕರೆತಂದು ಕೋರ್ಟ್‌ಗೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net