ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

Crime Logo
Published on

ಶಿಗ್ಗಾಂವಿ: ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಮೆಹಬೂಬನಗರದಲ್ಲಿ ಗುರುವಾರ ನಡೆದಿದೆ.

ಹನುಮಂತಪ್ಪ ಭೀಮಣ್ಣ ಬಂಡಿವಡ್ಡರ (50) ಮೃತ ವ್ಯಕ್ತಿ.

ಇವರು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಜಮೀನುವೊಂದರಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net