ಕಿದ್ವಾಯಿಗೆ ಆಡಳಿತಾಧಿಕಾರಿ ನೇಮಕ

Kidwai
Published on

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ ನೂತನ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಈ ನೇಮಕ ಮಾಡಿ ಆದೇಶಿಸಿದೆ.

ಸಂಸ್ಥೆಯ ಅವ್ಯವಸ್ಥೆ ಹಾಗೂ ಕಾರ್ಯನಿರ್ವಹಣೆ ಕುರಿತು ಸ್ವೀಕೃತವಾದ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಡಾ. ಅರುಂದತಿ ಚಂದ್ರಶೇಖರ್ ನೇತೃತ್ವದ ಸಮಿತಿ 2023ರ ನವೆಂಬರ್‌ನಲ್ಲಿ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿತ್ತು. ವರದಿಯಲ್ಲಿ ಸಂಸ್ಥೆಯ ಒಟ್ಟಾರೆ ಕಾರ್ಯನಿರ್ವಹಣೆಯಲ್ಲಿ ಸಮರ್ಥ ಆಡಳಿತ ವ್ಯವಸ್ಥೆಯಲ್ಲಿ ಲೋಪದೋಷಗಳು ಆಗಿದ್ದು, ಇದನ್ನು ಸರಿಪಡಿಸಲು ಹಾಗೂ ಮೇಲ್ವಿಚಾರಣೆಗಾಗಿ ಅಡಳಿತ ಸೇವೆಗೆ ಅಧಿಕಾರಿಯನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಬಹುದೆಂದು ಶಿಾರಸು ಮಾಡಲಾಗಿತ್ತು. ಅದರನ್ವಯ ವೈದ್ಯಕೀಯ ಶಿಕ್ಷಣ ಇಲಾಖೆಯು ಸಂಸ್ಥೆಯ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಅಲ್ಪ ಅವಧಿಗೆ ಐಎಎಸ್ ಅಧಿಕಾರಿ ಎನ್. ಮಂಜುಶ್ರೀ ಅವರನ್ನು ನೇಮಿಸಿತ್ತು. ಬಳಿಕ ಐಎಎಸ್ ಅಧಿಕಾರಿ ಡಾ. ವೈ. ನವೀನ್ ಭಟ್ ಅವರನ್ನು ನೇಮಿಸಿತ್ತು. ಅವರು ಚಿಕ್ಕಬಳ್ಳಾಪುರಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ವರ್ಗಾವಣೆಗೊಂಡಿದ್ದು, ಅವರ ಆಡಳಿತಾಧಿಕಾರಿ ಅವಧಿ ಪೂರ್ಣಗೊಂಡಿತ್ತು. ಹಾಗಾಗಿ ಸರ್ಕಾರ ಈ ಹೊಸ ನೇಮಕ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net