

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಹಾಗೂ ಮ್ಯಾಮೋಗ್ರಾಮ್ ಯಂತ್ರ ಕೆಟ್ಟಿದ್ದು, ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೋಗಿಗಳಿಗೆ ನಿಮ್ಹಾನ್ಸ್ ಹಾಗೂ ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ.
ಸಂಸ್ಥೆಯಲ್ಲಿರುವ ಎಂಆರ್‌ಐ ಸ್ಕ್ಯಾನಿಂಗ್ ಕಾರ್ಯನಿರ್ವಹಿಸದ ಕಾರಣ ರೋಗಿಗಳಿಗೆ ಚಿಕಿತ್ಸೆಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಪರ್ಯಾಯವಾಗಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸಂಬಂಧಿ ಈ ಎರಡು ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹಾಗಾಗಿ ರೋಗಿಗಳು ಸಹಕರಿಸಬೇಕು ಎಂದು ಕೋರಿದೆ.
ಹೊಸ ಯಂತ್ರ ಖರೀದಿಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ದುರಸ್ಥಿಯಲ್ಲಿರುವ ಎಂಆರ್‌ಐ (ತಾಂತ್ರಿಕ ಸಮಸ್ಯೆ) ಹಾಗೂ ಮ್ಯಾಮೋಗ್ರಾಮ್ ಯಂತ್ರ ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರೋಗಿಗಳ ಅನುಕೂಲಕ್ಕೆ ಶೀಘ್ರದಲ್ಲೆ ಎರಡೂ ಸ್ಕ್ಯಾನಿಂಗ್‌ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಿಳಿಸಿದೆ.