ಚಿಕ್ಕೋಡಿ: ತೈಲ ಬೆಲೆ ಏರಿಕೆಗೆ ವಿರೋಧ

01
Published on

ಚಿಕ್ಕೋಡಿ: ದೇಶದಲ್ಲಿ ಇಂಧನ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟಿಸಿ, ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಪಾದಯಾತ್ರೆ ಮೂಲಕ ತೆರಳಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾದರೂ ಅದರ ಲಾಭವನ್ನು ಕೇಂದ್ರ ಸರ್ಕಾರ ಜನರಿಗೆ ನೀಡುತ್ತಿಲ್ಲ.

ಬೆಲೆ ಏರಿಕೆ ಬಿಸಿಯಿಂದ ಜನರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಕಳೆದ ವರ್ಷ ಸುರಿದ ಮಳೆ ಹಾಗೂ ಕೃಷ್ಣಾ ನದಿ ಪ್ರವಾಹದಲ್ಲಿ ಹಾನಿ ಅನುಭವಿಸಿದ ಸಂತ್ರಸ್ತರಿಗೆ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ. ಶೀಘ್ರ ಪರಿಹಾರ ವಿತರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಮಾಜಿ ಶಾಸಕ ಕಲ್ಲಪ್ಪಣ್ಣ ಮಗೆಣ್ಣವರ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಗಿರೀಶ ಬುಟಾಳೆ, ರಾಜೇಂದ್ರ ಐಹೊಳೆ, ನಿಪ್ಪಾಣಿ ಬ್ಲಾಕ್ ಅಧ್ಯಕ್ಷ ಅಣ್ಣಾ ಪಾಟೀಲ, ಬಿ.ಬಿ. ಮುಗಳಿಹಾಳ, ಪ್ರಭಾಕರ ಪಾಟೀಲ, ಭಾಗ್ಯಶ್ರೀ ಕದಂ, ಎಂ.ಕೆ. ಪಾಟೀಲ, ಕಾಡಗೌಡ ಪಾಟೀಲ, ಬಸುಗೌಡ ಪಾಟೀಲ, ಜಾಕೀರ ಜಾಹಂಗೀರದಾರ,
ಮುದ್ದುಶೀರ ಆಲಾಲಖಾನ್ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net