

ರಾಮನಗರ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರವೀಶ (35) ಸ್ನೇಹಿತನಿಂದಲೇ ಕೊಲೆಯಾದ ವ್ಯಕ್ತಿ. ಕನಕಪುರ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ.
ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ರವಿಕುಮಾರ್ @ ಲೊಡ್ಡೆ ಎಂಬಾತ ಚಾಕುವಿನಿಂದ ಇರಿದು ಕೊಲೆಮಾಡಿದ್ದಾನೆ.
ರವಿಕುಮಾರ್ ನನ್ನು ಕೋಡಿಹಳ್ಳಿ ಠಾಣೆ ಪೊಲೀಸರು ಬಂದಿಸಿದ್ದಾರೆ.