ಮಲೆ ಮಾದೇಶ್ವರ ಅರಣ್ಯದಲ್ಲಿ ಹುಲಿಗಳ ಹತ್ಯೆ : ಮೈಸೂರಿನಲ್ಲಿ ಪ್ರತಿಭಟನೆ

Killing of tigers in Male Madeshwara forest Protest in Mysore
Published on

ಮೈಸೂರು: ಮಲೆ ಮಾದೇಶ್ವರ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ನಗರದ ದೇವರಾಜ ಅರಸು ರಸ್ತೆಯಲ್ಲಿ ಶನಿವಾರ ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ತಪ್ಪಿತಸ್ಥರಿಗೆ ಕಠಿಣ ಶಿಕ್ಷಣ ವಿಧಿಸಬೇಕು, ಕರ್ತವ್ಯಲೋಪ ಎಸಗಿರುವ ಹಿರಿಯ ಅಧಿಕಾರಿಗಳ ವಿರುದ್ಧವು ಶಿಸ್ತು ಕ್ರಮ ಜರುಗಿಸಬೇಕು ಎಂದು ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಆಗ್ರಹಿಸಿದರು.

ಹುಲಿಗಳ ಬಗ್ಗೆ ಸಮಾಜ ಮತ್ತು ಸರ್ಕಾರ ಎರಡೂ ಬಹಳ ಪ್ರಾಮುಖ್ಯತೆ ಕೊಡುತ್ತವೆ, ಅಂತದರಲ್ಲಿ ತಾಯಿ ಹುಲಿ ಹಾಗೂ 4 ಮರಿಗಳು ಸಾವಿಗಿಡಾಗಿರುವುದು ಆಘಾತಕಾರಿಯಾಗಿರುವ ವಿಷಯ, ಹುಲಿಗಳ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷವೇ ಕಾರಣವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬಹಳಷ್ಟು ಜನದಟ್ಟಣೆಗೆ ಅವಕಾಶ ಮಾಡಿಕೊಟ್ಟಿರುವುದು ಇಂತಹ ಅನಾಹುತಗಳಿಗೆ ಕಾರಣವಾಗಿದೆ. ಅರಣ್ಯ ಪ್ರದೇಶಗಳಲ್ಲಿ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಅವಘಡಗಳು ಹೆಚ್ಚಾಗುತ್ತದೆ. ಅದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವನ್ಯಜೀವಿ ಛಾಯಾಗ್ರಹಕ ಉಮೇಶ್, ವೇದಿಕೆ ಪದಾಧಿಕಾರಿಗಳಾದ ಜಿ.ರಾಘವೇಂದ್ರ, ಎಸ್.ಎನ್. ರಾಜೇಶ್, ನಂಜುಂಡಿ, ರವಿಚಂದ್ರ, ನೀತು, ಮಂಜುನಾಥ್, ರವಿ, ಯತೀಶ್ ಬಾಬು, ಈಶ್ವರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net