

ಮೂಲ್ಕಿ: ಮಹಿಳೆಯರು ಮೊಬೈಲ್, ಸಾಮಾಜಿಕ ಜಾಲತಾಣಗಳ ಬಗ್ಗೆ ಎಚ್ಚರಿಕೆಯಿಂದ ವ್ಯವಹರಿಸುವುದರ ಜತೆಗೆ ಮಕ್ಕಳಿಂದಲೂ ದೂರವಿರಿಸಬೇಕು ಎಂದು ಮೂಲ್ಕಿ ಪೊಲೀಸ್ ಠಾಣಾಧಿಕಾರಿ ಸುರೇಶ್ ಕುಂದರ್ ಹೇಳಿದರು.
ಕಿಲ್ಪಾಡಿ ಗ್ರಾಮ ಪಂಚಾಯಿತಿ ವತಿಯಿಂದ ವ್ಯಾಸ ಮಹರ್ಷಿ ವಿದ್ಯಾಪೀಠ ಶಾಲೆಯ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜನೆಗೊಂಡಿದ್ದ ಮಹಿಳಾ ಗ್ರಾಮಸಭೆಯಲ್ಲಿ ಮಾತನಾಡಿದರು. ಮಹಿಳಾ ದೌರ್ಜನ್ಯ, ಪೋಕ್ಸೊ ಕಾಯ್ದೆ ಕುರಿತು ಠಾಣಾಧಿಕಾರಿ ಮಾಹಿತಿ ನೀಡಿದರು.
ಕಿಲ್ಪಾಡಿ ಗ್ರಾಮದ ಬೀಟ್ ಪೊಲೀಸ್ ಸಂದೀಪ್ ಕಳ್ಳತನ ಸಹಿತ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣದ ವಿಚಾರಗಳಿದ್ದ ಪತ್ರಗಳನ್ನು ಗ್ರಾಮಸ್ಥರಿಗೆ ವಿತರಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಪಂಚಾಯಿತಿ ವತಿಯಿಂದ ಮಹಿಳೆಯರಿಗೆ ಇರುವ ವಿವಿಧ ಯೋಜನೆಗಳ ಮಾಹಿತಿ ನೀಡಿದರು.
ಕಿಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಕಾಸ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ದಮಯಂತಿ ಶೆಟ್ಟಿಗಾರ್, ಸದಸ್ಯರಾದ ಲೀಲಾವತಿ ಮಮತಾ ಶೆಟ್ಟಿ, ಸಂಜೀವಿನಿ ಒಕ್ಕೂಟದ ಪ್ರಮೀಳಾ ಮಾಧವ, ಕಾರ್ಯದರ್ಶಿ ಹರಿಶ್ಚಂದ್ರ ಉಪಸ್ಥಿತರಿದ್ದರು.