ಕಿಮ್ಸ್​ನಲ್ಲಿ ಮತದಾನ ಜಾಗೃತಿ

kims neew new
Published on

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಕಿಮ್ಸ್​ನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳವಾರದಂದು ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು.

ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ್ ಟಿ.ಕೆ. ಅವರು ಮತದಾನದ ಮಹತ್ವ ಕುರಿತು ತಿಳಿಸಿದರು.

ಸಹಾಯಕ ಚುನಾವಣಾಧಿಕಾರಿಯಾದ ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಕಿಮ್ಸ್ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ, ಕಿಮ್ಸ್ ಪ್ರಾಚಾರ್ಯ ಡಾ. ಈಶ್ವರ ಹೊಸಮನಿ, ಡಿಮಾನ್ಸ ನಿರ್ದೇಶಕ ಡಾ. ಅರುಣಕುಮಾರ ಸಿ., ಬಿಆರ್​ಟಿಎಸ್ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಭಜಂತ್ರಿ, ಹುಬ್ಬಳ್ಳಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ, ಕಿಮ್ಸ್ ವೈದ್ಯರು, ಆಡಳಿತ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net