

ಅಥಣಿ: ಸಾಮಾಜಿಕ ಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸು ಸಾಮಾಜಿಕ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿದ ನೇತಾರ ಎಂದು ಉಪನ್ಯಾಸಕಿ ಡಾ.ಪ್ರಿಯಂವದಾ ಹುಲಗಬಾಳಿ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೆಂಕಟೇಶ ಕುಲಕರ್ಣಿ ಮಾತನಾಡಿ, ಅರಸು ಲಕ್ಷಾಂತರ ಬಡವಿದ್ಯಾರ್ಥಿಗಳಿಗೆ ವಸತಿ ನಿಲಯಗಳನ್ನು ನಿರ್ಮಿಸಿ ಉಚಿತ ಊಟ, ವಸತಿ, ಶಿಕ್ಷಣ ನೀಡಿದ್ದಾರೆ ಎಂದರು.
ವಸತಿ ನಿಲಯದ ವಿದ್ಯಾರ್ಥಿಗಳಾದ ರವಿ ಪಾಟೀಲ, ಅಶ್ವಿನಿ ಲಿಂಗನೂರ, ಸಾಗರಿಕಾ ರೆಡ್ಡಿ, ಸಮ್ಮದ ಬಳೋಜ್ ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ತಹಸೀಲ್ದಾರ್ ದಿನೇಶಕುಮಾರ ಮೀನಾ, ತಾಪಂ ಇಒ ಶಿವಾನಂದ ಕಲ್ಲಾಪುರ, ಕೃಷಿ ಅಧಿಕಾರಿ ನಿಂಗಣ್ಣ ಬಿರಾದಾರ, ಗ್ರೇಡ್-2 ತಹಸೀಲ್ದಾರ್ ಮ
ಹಾದೇವ ಬಿರಾದಾರ, ಸಿದ್ಧಾರ್ಥ ಸಿಂಗೆ, ಆರ್.ಎಸ್. ಪಾಟೀಲ, ಅಶೋಕ ಸತಿಗೌಡರ, ಬಸಲಿಂಗ ಯಲ್ಲಟ್ಟಿ, ಪಾರ್ವತಿ ಮಲಗೌಡರ ಇತರರಿದ್ದರು.