ಕಿಂಗ್ ಪಿನ್ ಬಂಧನಕ್ಕೆ ಪೊಲೀಸರು ವಿಳಂಬ ಮಾಡಿದ್ರೆ ಕ್ರಮ ಖರ್ಗೆ ಎಚ್ಚರಿಕೆ

ಕಲಬುರಗಿ: ಕೆ ಇ ಎ ಪರೀಕ್ಷೆಯಲ್ಲಿ ಅಕ್ರಮದ ಕಿಂಗ್ ಪಿನ್ ಆರ್. ಡಿ.ಪಾಟೀಲ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾರಣದ ಕುರಿತು ಎಂಬುದರ ಮಾಹಿತಿ ಪಡೆಯುತ್ತೇನೆ. ಅಧಿಕಾರಿಗಳು ವಿಳಂಬ ನೀತಿ ಅನುಸರಿದರೆ ಕ್ರಮ ಖಚಿತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
Priyank Kharge
Published on

ಕಲಬುರಗಿ: ಕೆ ಇ ಎ ಪರೀಕ್ಷೆಯಲ್ಲಿ ಅಕ್ರಮದ ಕಿಂಗ್ ಪಿನ್ ಆರ್. ಡಿ.ಪಾಟೀಲ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾರಣದ ಕುರಿತು ಎಂಬುದರ ಮಾಹಿತಿ ಪಡೆಯುತ್ತೇನೆ. ಅಧಿಕಾರಿಗಳು ವಿಳಂಬ ನೀತಿ ಅನುಸರಿದರೆ ಕ್ರಮ ಖಚಿತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಆರೋಪಿಯನ್ನು ಬಿಡುವ ಪ್ರಶ್ನೆಯೇ ಇಲ್ಲ. ಪದೇ ಪದೆ ಜಾಗ ಬದಲಾಯಿಸುತ್ತಿದ್ದಾನೆ. ಮೊಬೈಲ್, ಸ್ಥಳವನ್ನು ಬದಲಾಯಿಸುತ್ತಿದ್ದಾನೆ. ತನಿಖೆಗೆ ಚುರುಕು ನೀಡಿದ್ದರಿಂದಲೆ ಆರೋಪಿ ಕಣ್ತಪ್ಪಿಸಿಕೊಳ್ಳುತ್ತಿದ್ದಾನೆ. ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿಲ್ಲ. ತನಿಖೆ ಮುಂದುವರಿಸಲಾಗುತ್ತಿದೆ ಎಂದು ಹೇಳಿದರು

ಅಕ್ರಮದ ಕುರಿತು ರಾಜ್ಯದ ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ತನಿಖೆ ನಡೆಸಿದ್ದು, ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಲ್ಲಿ ತನಿಖೆ ಪೂರ್ಣಗೊಂಡ ನಂತರ ಸಿಐಡಿಗೆ ವಹಿಸುವ ಕುರಿತು ಗೃಹ ಸಚಿವರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net