

ಮಂಗಳೂರು: ಕಿನ್ನಿಗೋಳಿ ಸಮೀಪದ ಹೊಸಕಾವೇರಿಯಲ್ಲಿ ಪತ್ನಿ ಮತ್ತು ಮಕ್ಕಳನ್ನು ಬಾವಿಗೆ ತಳ್ಳಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಮಹಿಳೆ ಮತ್ತು ಮತ್ತು ಯುವಕನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಮಕ್ಕಳನ್ನು ಆಸ್ಪತ್ರೆಗೆ ಸೇರಿಸುವ ಮಧ್ಯೆ ಸಾವನ್ನಪ್ಪಿದ್ದಾರೆ.
ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.