

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ಬಂಧುತ್ವ ಬಲಿಷ್ಠಗೊಳ್ಳಲು ಕಾರಣವಾಗುವ ಪವಿತ್ರ ಹಬ್ಬ ರಕ್ಷಾಬಂಧನ. ಪರಸ್ಪರ ಪ್ರೀತಿಸಲು ಕಲಿಸುವ ಆಚರಣೆಯಾಗಿದೆ. ರಕ್ಷಾಬಂಧನಕ್ಕೆ ಜಾತಿ ಮತಗಳ ತಾರತಮ್ಯ ಇಲ್ಲ ಎಂದು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ನಾಯಕ್ ಹೇಳಿದರು.
ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಹಾಗೂ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆ ಸಹಯೋಗದೊಂದಿಗೆ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿದರು.
ನಿವೇದಿತಾ ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್.ತಾಂಡೇಲ ಮತ್ತು ಎಸ್. ವಿ.ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್ ಶುಭಾಶಂಸನೆಗೈದರು. ವಸಂತಿ ಎನ್.ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ ಉಪಸ್ಥಿತರಿದ್ದರು.
ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಕಾರ್ಯದರ್ಶಿ ಅಶ್ವಿತಾ ಜಿ.ಪೈ ವಂದಿಸಿದರು. ಸವಿತಾ ಉಮಾನಾಥ ದೇವಾಡಿಗ ಪ್ರಸ್ತಾವನೆಗೈದರು. ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮ ನಿರೂಪಿಸಿದರು.