

ಬೆಳಗಾವಿ: ರೈತರಿಗೆ ಬೀಜ, ರಸಗೊಬ್ಬರ, ಕೀಟನಾಶಕ, ಮಣ್ಣು ಪರೀಕ್ಷೆ ಈ ರೀತಿ ಹಲವಾರು ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಇಡಿ ದೇಶದಾದ್ಯಂತ ಸುಮಾರು ಒಂದು ಲಕ್ಷ ಇಪ್ಪತೈದು ಸಾವಿರ (1.25) ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮ ಸ್ವಾಗತಾರ್ಹ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಮೂಲಕ ಕಿಸಾನ್ ಸಮೃದ್ಧಿ ಕೇಂದ್ರಗಳಲ್ಲಿ ರೈತರಿಗೆ ಈ ರೀತಿ ಒಂದೇ ಸೂರಿನಡಿ ಹಲವಾರು ಸೇವೆಗಳ ಸೌಲಭ್ಯ ದೊರೆಯಲಿದೆ. ಮತ್ತು ಈ ಸಮೃದ್ದಿ ಕೇಂದ್ರಗಳನ್ನು ದೇಶದ ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ಕೃಷಿ ವಿಶ್ವವಿದ್ಯಾಲಯದೊಂದಿಗೆ ನೇರವಾಗಿ ಸಂಪರ್ಕ ಹೊಂದುವ ವ್ಯವಸ್ಥೆಯನ್ನು ಮಾಡಲಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ರೈತರು ಸ್ಪರ್ಧೆ ಮಾಡುವ ದೃಷ್ಠಿಯಿಂದ ಅವರಿಗೆ ಬೇಕಾದ ಅಗತ್ಯ ತಾಂತ್ರಿಕ ಸಲಹೆಗಳು ಉಳಿದಂತ ಎಲ್ಲಾ ಸೌಲಭ್ಯಗಳನ್ನು ಈ ಕೇಂದ್ರದಡಿ ನೀಡಲು ಕ್ರಮ ವಹಿಸಿದ್ದಾರೆ. ಇನ್ನೂ ಮುಂದೆ ರಾಸಾಯನಿಕ ಗೊಬ್ಬರ ಮಾರಾಟಗಾರರು ಕೃಷಿ ಪದವಿದರರು ಮಾತ್ರ ಇರುತ್ತಾರೆ.