ಗ್ರಾಮಾಡಳಿತ ಅಧಿಕಾರಿಗಳ ಮುಷ್ಕರಕ್ಕೆ ಕಿಸಾನ್ ಸಂಘ ಬೆಂಬಲ

HNR BEMBALA
Published on

ಹೊನ್ನಾವರ: ರಾಜ್ಯ ಗ್ರಾಮಾಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರಕ್ಕೆ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಬುಧವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳನ್ನು ಪರಿಹರಿಸಿ ಸಾರ್ವಜನಿಕರ ಮತ್ತು ರೈತರ ಕೆಲಸ ಕಂದಾಯ ಇಲಾಖೆಯಲ್ಲಿ ಸುಗಮವಾಗಿ ನಡೆಯುವಂತೆ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

ಕಿಸಾನ್ ಸಂಘದ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಎಂ.ಆರ್. ಹೆಗಡೆ ನೇತೃತ್ವದಲ್ಲಿ ಸಂಘದ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ಬುಧವಾರ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಗ್ರಾಮಾಡಳಿತ ಅಧಿಕಾರಿಗಳಿಗೆ ಮೂಲಸೌಕರ್ಯ ಒದಗಿಸಿ ಅವರು ಗ್ರಾಮದಲ್ಲಿಯೇ ಉಳಿದು ಕೆಲಸ ಮಾಡಿಕೊಡುವಂತೆ ವ್ಯವಸ್ಥೆ ಜಾರಿಗೊಳಿಸಬೇಕು. ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಿ ರೈತರು ತಾಲೂಕು ಕೇಂದ್ರಕ್ಕೆ ಅಲೆಯುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಡಿ.ಎಂ. ನಾಯ್ಕ, ಸದಸ್ಯ ವಿ.ಐ. ಹೆಗಡೆ, ತಾಲೂಕಾಧ್ಯಕ್ಷ ಗಣಪತಿ ಐ. ಹೆಗಡೆ, ಕಾರ್ಯದರ್ಶಿ ವಿನಾಯಕ ಎಸ್. ಹೆಗಡೆ, ಸದಸ್ಯ ಎಂ.ಡಿ. ಭಟ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net