ಕಿಶೋರ್ ಕುಮಾರ್ ಪ್ರಮಾಣ ವಚನ ಸ್ವೀಕಾರ

mng-30oct-kishore kumar
Published on

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಚುನಾಯಿತರಾದ ಕಿಶೋರ್ ಕುಮಾರ್ ಪುತ್ತೂರು ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net