

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂಘವು ಶಾಂತಾದೇವಿ ಮಾಳವಾಡ ದತ್ತಿ ನಿಮಿತ್ತ ಅ. 23ರಂದು ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಕಿತ್ತೂರ ಚನ್ನಮ್ಮ ವಿಜಯೋತ್ಸವ 200ನೇ ವರ್ಷದ ಸಂಭ್ರಮಾಚರಣೆ ಏರ್ಪಡಿಸಿದೆ.
ಬೆಳಗ್ಗೆ 10 ಗಂಟೆಗೆ ಕಿತ್ತೂರ ಚನ್ನಮ್ಮ ವಿಜಯೋತ್ಸವದ ಜ್ಯೋತಿ ಮೆರವಣಿಗೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಚಾಲನೆ ನೀಡುವರು. ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು. 11.30ಕ್ಕೆ ಸ್ವಾತಂತ್ರ್ಯದ ಅರಿವು: ಮಹಿಳಾ ಹೋರಾಟದ ಹೆಜ್ಜೆಗಳು ಕುರಿತು ವಿಚಾರ ಸಂಕಿರಣ ನಡೆಯಲಿದ್ದು, ಡಾ. ಶರಣಮ್ಮ ಗೋರೆಬಾಳ ವಿಷಯ ಮಂಡಿಸುವರು. ಡಾ. ಶಾಂತಾ ಇಮ್ರಾಪುರ ಅಧ್ಯಕ್ಷತೆ ವಹಿಸುವರು.
ಮಧ್ಯಾಹ್ನ 3 ಗಂಟೆಗೆ ದೇಶ ಭಕ್ತೀಗಿತೆ ಮತ್ತು ಕೋಲಾಟ ಸ್ಪರ್ಧೆ ಜರುಗುವುದು. ಸಂಜೆ 5 ಗಂಟೆಗೆ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜರುಗುವುದು. ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಸಮಾರೋಪ ನುಡಿಗಳನ್ನಾಡುವರು. ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸುವರು.