

ಬೆಳಗಾವಿ : ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ, ಬೆಳಗಾವಿ ಹಾಗೂ ವಕೀಲರ ಸಂಘ, ಚನ್ನಮ್ಮ ಕಿತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಚನ್ನಮ್ಮ ಕಿತ್ತೂರು ನ್ಯಾಯಾಲಯದ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಮೇ.26ರಂದು ಶುಕ್ರವಾರ ಸಂಜೆ 5.30ಕ್ಕೆ ನೆರವೇರಲಿದೆ.
ಶಿಲಾನ್ಯಾಸ ಸಮಾರಂಭಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ. ವರಾಳೆ, ಚನ್ನಮ್ಮ ಕಿತ್ತೂರು ನ್ಯಾಯಾಲಯದ ನೂತನ ಕಟ್ಟಡದ ಶಿಲಾನ್ಯಾಸ ನೆರವೇರಿಸಲಿದ್ದಾರೆ, ಆಡಳಿತಾತ್ಮಕ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಶಿಲಾನ್ಯಾಸ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅನಿಲ್ ಬಿ. ಕಟ್ಟಿ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿಜಯಕುಮಾರ ಪಾಟೀಲ. ಚನ್ನಮ್ಮ ಕಿತ್ತೂರು ಶಾಸಕ ಬಾಬಾಸಾಹೇಬ ಬಿ.ಪಾಟೀಲ,ಕರ್ನಾಟಕ ಉಚ್ಚ ನ್ಯಾಯಾಲಯದ ಮಹಾವಿಲೇಖನಾಧಿಕಾರಿ ಕೆ.ಎಸ್. ಭರತಕುಮಾರ, ಕರ್ನಾಟಕ ರಾಜ್ಯ ವಕೀಲರ ಪರಿಷತ್ ಉಪಾಧ್ಯಕ್ಷ ವಿನಯ ಮಾಂಗಲೇಕರ, ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಸದಸ್ಯ ಕಲ್ಮೇಶ ಕಿವಡ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ ಎಸ್.ಎ. ಅವರು ತಿಳಿಸಿದ್ದಾರೆ.