

ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಅ. 23ರಂದು ಬೆಳಗ್ಗೆ 11.30ಕ್ಕೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ವಿನಯ ಕುಲಕರ್ಣಿ, ಅಬ್ಬಯ್ಯ ಪ್ರಸಾದ, ಭರಮಗೌಡ ಅಲಗೌಡ ಕಾಗೆ, ಜೆ.ಎನ್.ಗಣೇಶ, ಎನ್.ಎಚ್ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ್, ಎಸ್.ವಿ.ಸಂಕನೂರ, ಪ್ರದಿಪ ಶೆಟ್ಟರ, ಮೇಯರ್ ರಾಮಪ್ಪ ಬಡಿಗೇರ, ನಿಗಮ ಮಂಡಳಿ ಅಧ್ಯಕ್ಷರು, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಪಂ ಸಿಇಒ ಸ್ವರೂಪ ಟಿ.ಕೆ., ವಿವಿಧ ಇಲಾಖೆ ಅಧಿಕಾರಿಗಳು, ಇತರರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.