ಠೇವಣಿ ಹಣ ಮರಳಿಸುವಂತೆ ಆಗ್ರಹ

14 Jaggu 3
filter: 135; fileterIntensity: 0.04; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.49759296, 0.26408327);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 40;
Published on

ಬೆಳಗಾವಿ: ಬೈಲಹೊಂಗಲದ ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್‌ನವರು ನಮ್ಮ ಠೇವಣಿ ಹಣ ಮರಳಿ ಕೊಡುತ್ತಿಲ್ಲ. ಅವರ ವಿರುದ್ಧ ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ ಎಂದು ಆಪಾದಿಸಿ ಜೈಹೋ ಜನತಾ ವೇದಿಕೆ ನೇತೃತ್ವದಲ್ಲಿ ಗ್ರಾಹಕರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಉಳಿತಾಯ ದೃಷ್ಟಿಯಿಂದ ಸೊಸೈಟಿಯಲ್ಲಿ ಠೇವಣಿ ಇರಿಸಿದ್ದೆವು. ಆದರೆ, 11 ತಿಂಗಳಿನಿಂದ ಹೋರಾಡುತ್ತಿದ್ದರೂ ನಮಗೆ ಹಣ ಮರಳಿ ನೀಡುತ್ತಿಲ್ಲ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ವಿಚಾರಿಸಿದರೆ ಸರಿಯಾಗಿ ಮಾಹಿತಿ ಕೊಡುತ್ತಿಲ್ಲ. ಇದನ್ನು ಗಮನಿಸಿದರೆ ಅಧಿಕಾರಿಗಳೂ ಈ ಹಗರಣದಲ್ಲಿ ಭಾಗಿಯಾದ ಸಂಶಯ ಮೂಡುತ್ತಿದೆ. ಹಾಗಾಗಿ ಜಿಲ್ಲಾಡಳಿತ ಮಧ್ಯಪ್ರವೇಶಿಸಿ, ನಮಗೆ ಠೇವಣಿ ಮೊತ್ತ ಮರಳಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು. ಶಿವಾನಂದ ಹಿರೇಮಠ, ಶರಣು ಹವಾಲ್ದಾರ, ಪ್ರವೀಣ ವಸ್ತ್ರದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net