

ವಿಜಯವಾಣಿ ಸುದ್ದಿಜಾಲ ಗದಗ
ಕಿತ್ತೂರ ಸಂಸ್ಥಾನದ ಸ್ವಾಭಿಮಾನ, ನಾಡಪ್ರೇಮವನ್ನು ಭಾರತ ದೇಶದ ಸ್ವಾತಂತ್ರ್ಯ ಪ್ರೀಯರಿಗೆ ಹೋರಾಟದ ಮೂಲಕ ತೋರಿಸಿಕೊಟ್ಟು, ನಾಡು ರಸಿದ ಹೋರಾಟಗಾತಿರ್ ಕಿತ್ತೂರಿನ ರಾಣಿ ಚೆನ್ನಮ್ಮ. ಪರಾಕ್ರಮ ಮತ್ತು ದೇಶಭಕ್ತಿಗೆ ಚೆನ್ನಮ್ಮ ಹೆಸಸುವಾಸಿ ಎಂದು ಪ್ರೊ. ಎಸ್. ಎ. ಆವಾರಿ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಭಾನುವಾರ ಕಸಾಪ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಸಾಹಿತ್ಯ ಸಿಂಚನ ಮಾಲಿಕೆಯಲ್ಲಿ ಮಾತನಾಡಿ, ಕಾಕತಿ ದೇಸಾಯಿ ಧೂಳಪ್ಪಗೌಡ ಹಾಗೂ ಪದ್ಮಾವತಿ ದಂಪತಿಯ ಗರ್ಭದಲ್ಲಿ 1778ರಲ್ಲಿ ಚೆನ್ನಮ್ಮ ಜನಿಸಿದರು. ಧೂಳಪ್ಪಗೌಡ ದೇಸಾಯಿ ಯುದ್ಧ ಕಲೆಯಲ್ಲಿ ನಿಪುಣರಾಗಿದ್ದರು. ಇವರು ತಮ್ಮ ಮಗಳಿಗೆ ಸರ್ವ ವಿದ್ಯೆಯನ್ನೂ ಕಲಿಸಿದ್ದರು. ರಾಜಕಳೆಯ ಹೆಣ್ಣು ಮಗುವೇ ಮುಂದೆ ಕಿತ್ತೂರ ಮಹಾಸಂಸ್ಥಾನದ ಮಹಾರಾಣಿ ಪಟ್ಟ ವಹಿಸಿಕೊಂಡು ಕಿತ್ತೂರು ನಾಡನ್ನು ಸಮೃದ್ಧ ನಾಡಾಗಿ ಬೆಳೆಸಿದ ಕೀತಿರ್ ರಾಣಿ ಚನ್ನಮ್ಮನವರಿಗೆ ಸಲ್ಲುತ್ತದೆ ಎಂದರು.
ಬ್ರಿಟಿಷರು ಭಾರತದಲ್ಲಿ ನೆಲೆಯೂರುವ ಸಮಯದಲ್ಲಿ ಇಲ್ಲಿಯ ರಾಜಕೀಯ ಪರಿಸ್ಥಿತಿ ಬಹಳ ವಿಲಕ್ಷಣವಾಗಿತ್ತು. ಉತ್ತರ ಹಿಂದುಸ್ಥಾನದಲ್ಲಿ ಮೊಲ ಬಾದಶಾಹಿ, ದಕ್ಷಿಣದಲ್ಲಿ ಸ್ವರಾಜ್ಯದ ವಿಸ್ತರಣೆಗಾಗಿ ಹೋರಾಡುತ್ತಿದ್ದ ಪೇಶವಾಯಿ, ಆಕ್ರಮಣಕಾರಿ ಧೋರಣೆಯ ಹೈದರಾಬಾದಿನ ನಿಜಾಮಶಾಹಿ ಹಾಗು ಮೈಸೂರಿನ ಹೈದರ್ ಅಲಿ ಇವರೆಲ್ಲರ ನಡುವೆ ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದ ಚಿಕ್ಕ ಪುಟ್ಟ ಪಾಳೆಗಾರರು ಇಂತಹ ರಾಜಕೀಯ ಪರಿಸ್ಥಿತಿ ಧೂರ್ತ, ಕ್ರೂರ ಧೋರಣೆಯ ಬ್ರಿಟಿಷ ಈಸ್ಟ ಇಂಡಿಯಾ ಕಂಪನಿಗೆ ಅಕಾಶವನ್ನು ಒದಗಿಸಿತ್ತು. ಇಂತಹ ಸಮಯದಲ್ಲಿ ಮಲ್ಲಸರ್ಜನ ದೊರೆಯನ್ನು ಟಿಪ್ಪು ಸುಲ್ತಾನನು ಸೆರೆ ಹಿಡಿದು ಕಪಾಲದುರ್ಗದಲ್ಲಿ ಸೆರೆಯಿಟ್ಟಿದ್ದನು. ಉಪಾಯದಿಂದ ತಪ್ಪಿಸಿಕೊಂಡ ದೊರೆ ವೆಲ್ಲೆಸ್ಲಿಗೆ ನೆರವು ನೀಡಿ ಕಿತ್ತೂರನ್ನು ಭದ್ರ ಗೊಳಿಸಿದ್ದನ್ನು ಎಂದರು.
ವಿಶ್ರಾಂತ ಉಪನ್ಯಾಸಕ ಬಿ. ಎಸ್. ಮಾನೇದ ಮಾತನಾಡಿ, ಸ್ವತಂತ್ರ ಸಂಗ್ರಾಮದ 1857ರ ಸಿಪಾಯಿ ದಂಗೆಯೇ ಮೊದಲನೆಯ ದಂಗೆ ಎಂದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಅದಕ್ಕೂ ಮುಂಚೆ 1824 ರಲ್ಲಿಯೇ ಕಿತ್ತೂರ ರಾಣಿ ಚನ್ನಮ್ಮ ತನ್ನ ಚಿಕ್ಕ ಸೈನ್ಯದ ಜತೆಗೂಡಿ ಬ್ರಿಟಿಷ ಸೈನ್ಯದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ್ದರು ಎಂದು ತಿಳಿಸಿದರು.
ವಿವೇಕಾನಂದಗೌಡ ಪಾಟೀಲ, ಶಿವಾನಂದ ಗಿಡ್ನಂದಿ, ದತ್ತಪ್ರಸನ್ನ ಪಾಟೀಲ, ಶ್ರೀಕಾಂತ ಬಡ್ಡೂರ, ಡಿ. ಎಸ್. ಬಾಪೂರಿ ಇತರರು ಇದ್ದರು.