ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟಾಯ್ಸ ಪಾರ್ಕ್! : ಸಂಸದ ಡಾ. ಮಂಜುನಾಥ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ

man
Published on

ರಾಮನಗರ  : ಬೆಂಗಳೂರು ಮೈಸೂರು ದಶಪಥ ಹೆದ್ದಾರಿಗೆ ಹೊಂದಿಕೊಂಡಂತೆ ಟಾಯ್ಸ ಪಾರ್ಕ್ ನಿರ್ಮಾಣ ಮಾಡುವ ಮೂಲಕ ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ಉತ್ತೇಜನ ನೀಡುವಂತೆ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್ ಮಂಜುನಾಥ್ ಕೇಂದ್ರ ಲೊಕೋಪಯೋಗಿ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಸಚಿವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಬೇಗ ಬೊಂಬೆ ಪಾರ್ಕ್ ನಿರ್ಮಿಸುವ ಭರವಸೆ ನೀಡಿದ್ದಾರೆ.

ದೆಹಲಿಯಲ್ಲಿ ಗಡ್ಕರಿ ಅವರನ್ನು ಬೇಟಿ ಮಾಡಿದ ಸಂಸದರು, ಚನ್ನಪಟ್ಟಣದ ಬೊಂಬೆಗಳಿಗೆ ಐತಿಹಾಸಿಕ ಹಿನ್ನೆಲೆಯಿದೆ. ಬೊಂಬೆಗಳ ನಾಡು ಎಂದೇ ಪ್ರಸಿದ್ಧವಾಗಿದೆ. ಸಾವಿರಾರು ಕುಟುಂಬಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೊಂಬೆ ಉದ್ಯಮದ ಮೇಲೆ ಅವಲಂಬಿತವಾಗಿವೆ.

ಬೆಂಗಳೂರು-ಮೈಸೂರು ದಶಪಥ ನಿರ್ಮಾಣದ ನಂತರ ಚನ್ನಪಟ್ಟಣ ನಗರಕ್ಕೆ ಆಗಮಿಸುವ ಪ್ರಯಾಣಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ಈ ಉದ್ಯಮದ ಮೇಲೆ ಅವಲಂಬಿತರಾಗಿರುವವರ ಸ್ಥಿತಿ ಶೋಚನೀಯವಾಗಿದೆ ಎಂದು ವಿವರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದಶಪಥದಲ್ಲಿ ಚನ್ನಪಟ್ಟಣ ಸಮೀಪ ಟಾಯ್ಸ ಪಾರ್ಕ್ ನಿರ್ಮಾಣ ಮಾಡುವ ಮೂಲಕ ಸ್ಥಳೀಯವಾಗಿ ಬೊಂಬೆ ತಯಾರಿಕೆಯ ಮೇಲೆ ಅವಲಂಬಿತರಾಗಿರುವವರಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಮತ್ತು ಬೊಂಬೆಗಳ ನಾಡು ಎಂಬ ಚನ್ನಪಟ್ಟಣದ ಹಿರಿಮೆಯನ್ನು ಹೆಚ್ಚಿಸಿದಂತಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net