ಟೆಕ್ವಾಂಡೋ ಸ್ಪರ್ಧೆಯಲ್ಲಿ ಶಾನ್ವಿ ಸಾಧನೆ

spor
Published on

ರಾಮನಗರ  : ಮಲೇಷ್ಯಾದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಟೆಕ್ವಾಂಡೋ ಸ್ಪರ್ಧೆಯಲ್ಲಿ ಶಾನ್ವಿ ಭಾರತವನ್ನು ಪ್ರತಿನಿಧಿಸಿ ಚಿನ್ನ, ಬೆಳ್ಳಿ ಹಾಗೂ ಕಂಚು ಪದಕ ಪಡೆದಿದ್ದಾರೆ.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಸತೀಶ್ ಮತ್ತು ಚೈತ್ರಾ ದಂಪತಿ ಪುತ್ರಿ ಶಾನ್ವಿ ಮೇ 1 ರಿಂದ 4ರವರೆಗೆ ಮಲೇಷ್ಯಾದ ಪ್ಯಾನಸೋನಿಕ್ ರಾಷ್ಟ್ರೀಯ ಕ್ರೀಡಾ ಕಾಂಪ್ಲೆಕ್ಸ್‌ನಲ್ಲಿ ಅಂತಾರಾಷ್ಟ್ರೀಯ ಟೇಕ್ವಾಂಡೋ ಸ್ಪರ್ಧೆಯ 7 ರಿಂದ 8 ವರ್ಷ ವಯೋಮಾನದ 23 ರಿಂದ 27 ಕೆಜಿ ತೂಕದ ವಿಭಾಗದಿಂದ ಭಾರತ ತಂಡ ಪ್ರತಿನಿಧಿಸಿದ್ದರು. ಈಕೆ ಸ್ಪಾರಿಂಗ್ ಸ್ಪರ್ಧೆಯಲ್ಲಿ 1 ಚಿನ್ನ, ಪ್ಯಾಟರ್ನ್ ವಿಭಾಗದಲ್ಲಿ 1 ಬೆಳ್ಳಿ ಹಾಗೂ ವಾರಿಯರ್ ಸ್ಪಾರಿಂಗ್ ವಿಭಾಗದಲ್ಲಿ 1 ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಸ್ಪಾರಿಂಗ್ ವಿಭಾಗದಲ್ಲಿ ಆರಂಭದಿಂದಲೂ ಮುನ್ನಡೆ ಸಾಧಿಸಿದ ಶಾನ್ವಿಗೆ ಅಂತಿಮ ಪಂದ್ಯದಲ್ಲಿ ಮಲೇಷ್ಯಾ ಸ್ಪರ್ಧಾಳು ಉತ್ತಮ ಪೈಪೋಟಿ ನೀಡಿದ್ದಳು. ಅಂತಿಮವಾಗಿ ಶಾನ್ವಿಗೆ ಚಿನ್ನದ ಪದಕ ಒಲಿದಿದೆ. ತರಬೇತುದಾರರಾದ ಪ್ರದೀಪ್ ಮತ್ತು ಬಾಲರಾಜನ್ ತರಬೇತಿ ನೀಡುತ್ತಿದ್ದಾರೆ.

ಭಾರತ, ಇಂಡೋನೇಷ್ಯಾ, ಬಾಂಗ್ಲಾದೇಶ, ಮಾಯನ್ಮಾರ್, ಸಿರಿಯಾ ಹಾಗೂ ಮಲೇಷ್ಯಾ ರಾಷ್ಟ್ರಗಳ 1500ಕ್ಕೂ ಹೆಚ್ಚು ಕ್ರೀಡಾಪಟುಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಭಾರತ ತಂಡದಿಂದ 65 ಕ್ರೀಡಾಪಟುಗಳು ಸ್ಪರ್ಧಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net