

ಮಡಿಕೇರಿ: ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಕೆ.ಮಂಜುನಾಥ್ ಕುಮಾರ್ ಗುರುವಾರ ನಾಮಪತ್ರ ಸಲ್ಲಿಸಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ತನ್ವೀರ್ ಸೇಟ್, ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್‌ನ ಶಾಸಕ ಮಂಜುನಾಥ್ ಭಂಡಾರಿ, ಪರಿಷತ್‌ನ ಪದವೀಧರ ಕ್ಷೇತ್ರದ ಅಭ್ಯರ್ಥಿ ಅಯನೂರು ಮಂಜುನಾಥ್, ಮಾಜಿ ಶಾಸಕ ಪ್ರಸನ್ನ ಕುಮಾರ್, ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಪ್ರಮುಖರಾದ ಅಶೋಕ್ ಕೊಡವೂರು, ಪ್ರಮುಖರು ಉಪಸ್ಥಿತರಿದ್ದರು.