ಹೊಸ ಅಭಿವೃದ್ಧಿ ಸೂಚ್ಯಂಕಕ್ಕೆ ಮುನ್ನುಡಿ
ವಿಜಯವಾಣಿ ಸುದ್ದಿಜಾಲ ಕಲಬುರಗಿ
ಪ್ರಾದೇಶಿಕ ಅಸಮಾನತೆ, ಬದಲಾವಣೆ, ಪರಿಣಾಮಗಳ ಅಧ್ಯಯನಕ್ಕಾಗಿ ರಾಜ್ಯ ಸರ್ಕಾರ ರಚಿಸಿರುವ ಗೋವಿಂದರಾವ್ ನೇತೃತ್ವದ ಸಮಿತಿ ಸರ್ಕಾರಕ್ಕೆ ವಿಸ್ತÈತ ವರದಿ ನೀಡಲಿದೆ. ಇದನ್ನಾಧರಿಸಿ ಹೊಸ ಅಭಿವೃದ್ಧಿ ಸೂಚ್ಯಂಕ ಸಿದ್ಧಪಡಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯಸಿಂಗ್ ತಿಳಿಸಿz್ದÁರೆ.
ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಕಾರ್ಯಚಟುವಟಿಕೆ ಕುರಿತು ಚರ್ಚಿಸಲಾಗಿದೆ. ಡಾ.ಡಿ.ಎಂ. ನಂಜುAಡಪ್ಪ ವರದಿ ಸುಮಾರು ೨೨ ವರ್ಷ ಹಳೆಯದಾಗಿದ್ದು, ನಂತರ ತಾಲೂಕುಗಳ ಸಂಖ್ಯೆ ಗಣನೀಯ ಏರಿಕೆಯಾಗಿದೆ. ಮುಖ್ಯವಾಗಿ ಹೊಸ ತಾಲೂಕುಗಳ ಹಿಂದುಳಿದಿರುವಿಕೆ ಗುರುತಿಸಿ ಅಭಿವೃದ್ಧಿಪಡಿಸುವ ಉz್ದೆÃಶದಿಂದ ಸರ್ಕಾರ ಈ ಸಮಿತಿ ರಚಿಸಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಪ್ರಾದೇಶಿಕ ಅಸಮಾನತೆಯಲ್ಲಿ ಆಗಿರುವ ಬದಲಾವಣೆ ಮತ್ತು ಪರಿಣಾಮ ಅಧ್ಯಯನ ಮಾಡಲು ಪ್ರೊ.ಗೋವಿಂದರಾವ್ ಅಧ್ಯP್ಷÀತೆಯ ಉನ್ನತಾಧಿಕಾರ ಸಮಿತಿ ರಚಿಸಲಾಗಿದೆ. ಈ ಮೂಲಕ ಪ್ರಸ್ತುತ ರಾಜ್ಯದ ಆರ್ಥಿಕ ಮತ್ತು ಪ್ರಾದೇಶಿಕ ಅಸಮಾನತೆ ಆಧಾರದ ಮೇಲೆ ಜಿ¯್ಲÉ ಮತ್ತು ತಾಲೂಕುಗಳನ್ನು ವರ್ಗೀಕರಿಸಿ ಹೊಸ ಅಭಿವೃದ್ಧಿ ಸೂಚ್ಯಂಕ ತಯಾರಿಸಲಾಗುವುದು. ಪ್ರಾದೇಶಿಕ ಅಸಮಾನತೆ ನಿವಾರಣೆ ನಿಟ್ಟಿನಲ್ಲಿ ನಿಜಾಮನ ಆಳ್ವಿಕೆಯಲ್ಲಿದ್ದ ಕಲಬುರಗಿ, ಬೀದರ್, ರಾಯಚೂರು ಹಾಗೂ ಮದ್ರಾಸ್ ಪ್ರಾಂತ್ಯದಲ್ಲಿದ ಬಳ್ಳಾರಿ ಜಿ¯್ಲÉ ಒಳಗೊಂಡAತೆ ಧರ್ಮಸಿಂಗ್ ವರದಿಯನ್ವಯ ೧೯೯೦ರಲ್ಲಿ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿತ್ತು. ಆ ಮೂಲಕ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರ ವಿಶೇಷ ಒತ್ತು ನೀಡಿದ್ದನ್ನು ಡಾ.ಅಜಯಸಿಂಗ್ ಮೆಲುಕು ಹಾಕಿz್ದÁರೆ.