

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿನ ಮಂಡಳಿ ಸಭಾಂಗಣದಲ್ಲಿ ಮಂಡಳಿಯ ಸರ್ವ ಸದಸ್ಯರ ಸಭೆ ನಡೆದಿದೆ. ಕುತೂಹಲ ಹೆಚ್ಚಿಸಿದೆ.
ಡಾ.ಅಜಯ್ ಸಿಂಗ್ ಅಧ್ಯಕ್ಷತೆಯ ಮಂಡಳಿ ಚೊಚ್ಚಲ ಸಭೆಗೆ
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರುಗಳು ಭಾಗವಹಿಸಿದ್ದರು.
ಇದಲ್ಲದೆ ಮಂಡಳಿ ಸದಸ್ಯರಾಗಿರುವ ಶಾಸಕರಾದ ಬಿ.ಆರ್.ಪಾಟೀಲ, ರಾಜಾ ವೆಂಕಟಪ್ಪ ನಾಯಕ್, ಹಂಪನಗೌಡ ಬಾದರ್ಲಿ, ಬಸವರಾಜ ರಾಯರೆಡ್ಡಿ, ರಾಘವೇಂದ್ರ ಇಟ್ನಾಳ್, ಇ.ತುಕಾರಾಮ್, ಹೆಚ್.ಆರ್.ಗವಿಯಪ್ಪ, ವಿಧಾನ ಪರಿಷತ್ ಶಾಸಕರಾದ ಅರವಿಂದ ಅರಳಿ, ತಿಪ್ಪಣಪ್ಪ ಕಮಕನೂರ ಅವರು ಸಭೆಯ ಚರ್ಚೆಯಲ್ಲಿ ಭಾಗವಹಿಸಿದ್ದರು.
ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ, ಮಂಡಳಿ ವಿಭಾಗದ ನಿರ್ದೇಶಕ ಡಿ.ಚಂದ್ರಶೇಖರಯ್ಯ, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಶಂಕರ ಮೀನಾ, ಮಂಡಳಿ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಉಪ ಕಾರ್ಯದರ್ಶಿ ಆನಂದಪ್ರಕಾಶ ಮೀನಾ ಸೇರಿದಂತೆ ಮಂಡಳಿಯ ಇನ್ನಿತರ ಅಧಿಕಾರಿಗಳು ಸಭೆಯಲ್ಲಿದ್ದರು.