ಕೆಕೆಆರ್‌ಡಿಬಿ ನೂತ‌ನ ಉಪ ಕಾರ್ಯದರ್ಶಿಗಳಾಗಿ ಪ್ರಮೀಳಾ ಎಂ.ಕೆ ಅಧಿಕಾರ ಸ್ವೀಕಾರ

IMG-20230925-WA0017
Published on

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಹಿರಿಯ ಕೆಎಎಸ್ ಅಧಿಕಾರಿಗದ ಪ್ರಮೀಳಾ ಎಂ. ಕೆ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು.
ಜೆಸ್ಕಾಂ ನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪ್ರಧಾನ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಅವರು ಹೆಚ್ಚುವರಿಯಾಗಿ ಅಪರ ಪ್ರಾದೇಶಿಕ ಆಯುಕ್ತರಾಗಿ ಸುಮಾರು ಮೂರುವರೆ ವರ್ಷಗಳ ಕಾಲ ಹೆಚ್ಚುವರಿಯಾಗಿ ಕಾರ್ಯ ನಿರ್ವಹಿಸಿದ್ದರು. ಕಲಬುರಗಿಯವರಾದ ಪ್ರಮೀಳಸ, 1999ರ ಕೆಎಎಸ್ ಬ್ಯಾಚ್ ಅಧಿಕಾರಿಯಾಗಿದ್ದು ಇದೀಗ ಹಿರಿಯ ಶ್ರೇಣಿಯ ಅಧಿಕಾರಿಯಾಗಿ ಭಡ್ತಿ ಹೊಂದಿದ್ದರು.ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಆಯುಕ್ತರಾಗಿ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದರು .

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net