

ವಿಜಯ ವಾಣಿ ಸುದ್ದಿಜಾಲ ಕಲಬುರಗಿ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯಾಗಿ ಐ.ಎ.ಎಸ್.ಅಧಿಕಾರಿ ಎಂ. ಸುಂದರೇಶ ಬಾಬು ಅವರು
ಮಂಗಳವಾರ ನಗರದಲ್ಲಿ ಇರುವ ಮಂಡಳಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
2012ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಇವರು ಇಲ್ಲಿಗೆ ವರ್ಗಾವಾಗಿ ಬರುವ ಮುನ್ನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಆಡಳಿತ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಕೆಲಸ ನಿರ್ವಹಿಸಿದ ಅನುಭವ ಇವರು ಹೊಂದಿದ್ದಾರೆ.
ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿ ಪ್ರಮೀಳಾ ಎಂ.ಕೆ. ಹೂಗುಚ್ಛ ನೀಡಿ ನೂತನ ಕಾರ್ಯದರ್ಶಿಗಳಿಗೆ ಶುಭ ಕೋರಿದರು.
ಜಂಟಿ ನಿರ್ದೇಶಕಿ ಪ್ರವೀಣಪ್ರಿಯಾ ಡೇವಿಡ್, ಅಧೀನ ಕಾರ್ಯದರ್ಶಿ ಮಲ್ಲೇಶ ತಂಗಾ, ಹಣಕಾಸು ನಿಯಂತ್ರಕಿ ಅಕ್ಕನಾಗಮ್ಮ, ಎಸ್.ಇ. ಸಿದ್ರಾಮೇಶ ಕಟ್ಟಿಮನಿ, ಮಂಡಳಿ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಲ್ಲಿಕಾರ್ಜುನ ರೆಡ್ಡಿ ಹಾಗೂ ಇತರೆ ಸಿಬ್ಬಂದಿಗಳು ಇದ್ದರು.