

ಕಲಬುರಗಿ :
ಕೆಕೆ ಆರ್ ಡಿ ಬಿ ಅಧ್ಯಕ್ಷರಾಗಿ ಈಚೆಗಷ್ಟೇ ಅಧಿಕಾರ ವಹಿಸಿಕೊಂಡಿರುವ ಡಾ. ಅಜಯ್ ಸಿಂಗ್ ಅವರಿಗೆ ರಾಜ್ಯ ಸರ್ಕಾರದ ಸಂಪುಟ ದರ್ಜೆ ಸಚಿವರ ಸ್ಥಾನ ಮಾನ ನೀಡಿ ಆದೇಶ ಹೊರಡಿಸಲಾಗಿದೆ.
ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರ ಸೂಚನೆಯಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿನ ಕಾರ್ಯದರ್ಶಿ ಮೊಹಮ್ಮದ್ ಅಕ್ಬರ್ ಇಂದು ಸಂಪುಟ ದರ್ಜೆ ಸ್ಥಾನ ಮಾನ ನೀಡುತ್ತಿರುವ ಬಬಗ್ಗೆ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ