ಕಲಬುರಗಿ : ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕೆ.ಕೆ.ಅರ್.ಡಿ.ಬಿ ಮಂಡಳಿ ಅನುದಾನದಡಿ ನಡೆಯುತ್ತಿರುವ ಹಲವು ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ ಮಾಡಿದರು. ವಿವಿಧ ಅನುಷ್ಟಾನ ಏಜೆನ್ಸಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿದರು.