ಅಫಜಲಪುರ; ಯುವ ರೈತ ಆತ್ಮಹತ್ಯೆ

PH 08
Published on

ಅಫಜಲಪುರ: ಸಾಲಬಾಧೆಯಿಂದಾಗಿ ಯುವ ರೈತನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಘೂಳನೂರ ಗ್ರಾಮದಲ್ಲಿ ಮಂಗಳವಾರ ಜರುಗಿದೆ.

ಘೂಳನೂರಿನ ದೇವಿಂದ್ರಪ್ಪ ಸುತಾರ (26) ಆತ್ಮಹತ್ಯೆಗೆ ಶರಣಾದವ. 4 ಎಕರೆ ಜಮೀನಿದ್ದು, ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 3 ಲಕ್ಷ ರೂ. ಹಾಗೂ ಖಾಸಗಿಯಾಗಿ 5 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದೆ. ಬೆಳೆಯೂ ಸಮರ್ಪಕವಾಗಿ ಬಂದಿಲ್ಲ. ಅಲ್ಲದೆ ಸಾಲವೂ ಹೆಚ್ಚಾಗಿದ್ದರಿಂದ ಮನನೊಂದು ಮನೆಯಲ್ಲಿಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೆಪಿಸಿಸಿ ಸದಸ್ಯ ಅರುಣಕುಮಾರ ಪಾಟೀಲ್​ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸರ್ಕಾರದಿಂದ ಪರಿಹಾರ ಕಲ್ಪಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು. ಪಿಎಸ್‌ಐ ರಾಹುಲ್ ಪವಾಡೆ, ಮುಖ್ಯಪೇದೆ ಸಂಗಣ್ಣ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net