ಸೇಡಂ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ, ಸಚಿವ ಪಾಟೀಲ್ ಎ1 ಆರೋಪಿ ಎಂದು ಪರಿಗಣಿಸಿ

IMG-20231021-WA0049
Published on

ಸೇಡಂ: ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆಯ ಪ್ರಕರಣದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರನ್ನು ಮೊದಲ ಆರೋಪಿ ಎಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಪ್ರಕರಣದ ತನಿಖೆ ಪೂರ್ಣಗೊಳ್ಳುವರೆಗೂ ಸಚಿವ ಸ್ಥಾನದಿಂದ ಡಾ.ಪಾಟೀಲ್ ಅವರನ್ನು ಕೈಬಿಡಲು ಒತ್ತಾಯಿಸಿದರು.

ಸಂಸದ ಡಾ.ಉಮೇಶ ಜಾಧವ, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ, ಶಾಸಕರಾದ ಡಾ.ಅವಿನಾಶ ಜಾಧವ, ಬಿ.ಜಿ.ಪಾಟೀಲ್, ಬಸವರಾಜ ಮತ್ತಿಮೂಡ, ಪ್ರಮುಖರಾದ ಚಂದು ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೆವಾಡಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net