ಸೇಡಂನಲ್ಲಿ ಜಿಲ್ಲಾ ಶೈಕ್ಷಣಿಕ ಸಹಮಿಲನ ನಾಳೆ

PH 10
Published on

ಸೇಡಂ: ಕೊತ್ತಲ ಬಸವೇಶ್ವರ ದೇವಾಲಯದ ಆವರಣದಲ್ಲಿನ ಕಲ್ಯಾಣ ಮಂಟಪದಲ್ಲಿ ವಿದ್ಯಾಭಾರತಿಯಿಂದ ಶನಿವಾರ ಬೆಳಗ್ಗೆ 10.30ಕ್ಕೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿದ್ಯಾಭಾರತಿ ಸಂರಕ್ಷಕ ಪಿ.ಭೀಮರೆಡ್ಡಿ ತಿಳಿಸಿದರು.

ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟಿಸುವರು. ಇಸ್ರೋ ಸಂಸ್ಥೆಯ ಮೆಕಾನಿಕಲ್ ಸಿಸ್ಟಮ್ ವಿಭಾಗದ ನಿವೃತ್ತ ಉಪ ನಿರ್ದೇಶಕ ಎಚ್.ಎನ್.ಸುರೇಶಕುಮಾರ ದಿನಚರಿ ಬಿಡುಗಡೆ ಮಾಡುವರು. ಮಧ್ಯಾಹ್ನ 12.30ಕ್ಕೆ ಪಂಚಕೋಶಾತ್ಮಕ ವಿಕಾಸದ ಬಗ್ಗೆ ವಿದ್ಯಾಭಾರತಿ ಪ್ರಾಂತ ಸಂಘಟನಾ ಕಾರ್ಯದರ್ಶಿ ಉಮೇಶಕುಮಾರ ಬೆಂಗಳೂರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ವಿದ್ಯಾಭಾರತಿಯ ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ಮಡಿವಾಳ, ಮಾರ್ಗದರ್ಶಕ ಮಂಡಳಿ ಸದಸ್ಯ ಆನಂತರೆಡ್ಡಿ ಪಾಟೀಲ್ ಹಾಶನಪಲ್ಲಿ ಉಪಸ್ಥಿತರಿರುವರು. ಎಸ್ಸೆಸ್ಸೆಲ್ಸಿ ಸಂಸ್ಕೃತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ಮಾತೃಛಾಯ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಸತ್ಕರಿಸಲಾಗುವುದು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಮಾರೋಪ ಕಾರ್ಯಕ್ರಮದಲ್ಲಿ ವಿದ್ಯಾಭಾರತಿಯ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ್, ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂರಕ್ಷಕ ಡಾ.ಬಸವರಾಜ ಪಾಟೀಲ್ ಸೇಡಂ ಭಾಗವಹಿಸುವರು ಎಂದು ಮಾಹಿತಿ ನೀಡಿದರು. ಶ್ರೀ ಸದಾಶಿವ ಸ್ವಾಮೀಜಿ, ಚನ್ನಬಸ್ಸಪ್ಪ ಗವಿ, ಕಾಶಿನಾಥ ಮಡಿವಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net