

ಬೆಳಗಾವಿ: ರೈತರ ಬೆಳೆ ಇಳುವರಿ ಹೆಚ್ಚಿಸುವ ನಿಟ್ಟಿನಲ್ಲಿ ಬೀಜ, ಮಣ್ಣು, ನೀರು ಪರೀಕ್ಷೆ ಕೇಂದ್ರಗಳ ಸೇವೆಯನ್ನು ಕೆಎಲ್‌ಇ ಕಷಿ ವಿಜ್ಞಾನ ಕೇಂದ್ರ ಮಾಡುತ್ತಿದೆ. ಇದು ರೈತರಿಗೆ ಸಾಕಷ್ಟು ಸಹಕಾರಿಯಾಗಿದೆ ಎಂದು ಬೆಂಗಳೂರಿನ ಪ್ರಧಾನ ವಿಜ್ಞಾನಿ ಹಾಗೂ ಕಷಿ ವಿಜ್ಞಾನ ಕೇಂದ್ರದ ನೋಡಲ್ ಅಧಿಕಾರಿ, ಡಾ.ಬಿ.ಟಿ.ರಾಯುಡು ತಿಳಿಸಿದರು.
ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಗ್ರಾಮದಲ್ಲಿರುವ ಕೆಎಲ್‌ಇ ಕಷಿ ವಿಜ್ಞಾನ ಕೇಂದ್ರದಲ್ಲಿ ಕಷಿ ಇಲಾಖೆ ಸಹಯೋಗದಲ್ಲಿ ಮೂರು ದಿನಗಳವರೆಗೆ ಜಲಾನಯನ ಕಾರ್ಯಕಾರಿ ಸಮಿತಿಯ ಸದಸ್ಯರು, ಬಳಕೆದಾರರ ಗುಂಪಿನ ಸದಸ್ಯರು ಹಾಗೂ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳಿಗೆ ಬುಧವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಮಂಜುನಾಥ ಚೌರಡ್ಡಿ ಕೇಂದ್ರದಲ್ಲಿ ಮಣ್ಣು ಮತ್ತು ನೀರು ಸಂರಕ್ಷಣೆ ಪದ್ಧತಿ ಕುರಿತು ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುತ್ತಿದೆ ಎಂದರು. ಕೇಂದ್ರದ ವಿಜ್ಞಾನಿ ಎಸ್.ಎಂ.ವಾರದ ಪ್ರಾಸ್ತಾವಿಕ ಮಾತನಾಡಿದರು. ಧಾರವಾಡ ಕಷಿ ವಿಶ್ವವಿದ್ಯಾಲಯದ ಹಿಂದಿನ ಕುಲಪತಿ ಡಾ. ಪಿ.ಎಸ್.ಹೂಗಾರ, ಕೇಂದ್ರದ ತೋಟಗಾರಿಕಾ ವಿಜ್ಞಾನಿ, ಪ್ರವೀಣ ಯಡಹಳ್ಳಿ, ಕ್ಷೇತ್ರ ವ್ಯವಸ್ಥಾಪಕ ಶಂಕರಗೌಡ ಪಾಟೀಲ ಇತರರಿದ್ದರು. ಜಿ.ಬಿ.ವಿಶ್ವನಾಥ ಸ್ವಾಗತಿಸಿದರು. ವಿನೋದ ಕೋಚಿ ವಂದಿಸಿದರು.