ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಕೆಎಲ್ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದೀಪದಾನ ಸಮಾರಂಭ ಸೆ. 25ರಂದು ಏರ್ಪಡಿಸಲಾಗಿದೆ.
ಬೆಳಗ್ಗೆ 11ಕ್ಕೆ ನಡೆಯುವ ಸ್ನೇಹ ಸಮ್ಮೇಳನದಲ್ಲಿ ಧಾರವಾಡ ಐಐಟಿ ಪ್ರಾಧ್ಯಾಪಕ ಡಾ. ಎಸ್.ಎಂ. ಶಿವಪ್ರಸಾದ ಅತಿಥಿಗಳಾಗಿ ಪಾಲ್ಗೊಳ್ಳುವರು. ಕೆಎಲ್ಇ ಬಿ.ಇಡಿ, ಡಿ.ಇಡಿ ವಿಭಾಗದ ಅಧ್ಯಕ್ಷ ಜಯಾನಂದ ಮುನವಳ್ಳಿ ಅಧ್ಯಕ್ಷತೆ ವಹಿಸುವರು.
ಸಂಜೆ 4.30ಕ್ಕೆ ಆಯೋಜಿಸಿರುವ ದೀಪದಾನ ಸಮಾರಂಭದಲ್ಲಿ ಗೋಕುಲ ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಪ್ರೊ. ಎಫ್.ಬಿ. ಸೊರಟೂರ ಅತಿಥಿಗಳಾಗಿ ಪಾಲ್ಗೊಳ್ಳುವರು. ಕವಿವಿ ಸಿಂಡಿಕೇಟ್ ಸದಸ್ಯ ಹಾಗೂ ಪ್ರಾಚಾರ್ಯ ಡಾ. ಲಿಂಗರಾಜ ಮುಳ್ಳಳ್ಳಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.