ಶಿಕ್ಷಕರು ಎಐ ಸವಾಲು ಎದುರಿಸಲು ಸನ್ನದ್ಧರಾಗಿ,  ಐಐಟಿಯ ಡಾ. ಎಸ್.ಎಂ. ಶಿವಪ್ರಸಾದ ಸಲಹೆ

IMG_20250926_115800_701-1.jpg
Published on

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಕೆಎಲ್ಇ ಸಂಸ್ಥೆಯ ಶಿಣ ಮಹಾವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಗುರುವಾರ ಏರ್ಪಡಿಸಲಾಗಿತ್ತು.

ಅತಿಥಿಗಳಾಗಿದ್ದ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಪ್ರಾಧ್ಯಾಪಕ ಡಾ. ಎಸ್.ಎಂ. ಶಿವಪ್ರಸಾದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ ಮತ್ತು ಅದರ ಪ್ರಯೋಜನೆಗಳ ಕುರಿತು ಮಾಹಿತಿ ನೀಡಿದರು.

ಭಾವಿ ಶಿಕ್ಷಕರು ತಾಂತ್ರಿಕ ವಿಷಯಗಳನ್ನು ಅರಿತುಕೊಂಡು ಮುಂದಿನ ಸವಾಲುಗಳನ್ನು ಎದುರಿಸಲು ಸನ್ನದ್ಧರಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಲ್ಇ ಶಿಕ್ಷಣ ಮಹಾವಿದ್ಯಾಲಯದ ಕಾರ್ಯಾಧ್ಯಕ್ಷ ಜಯಾನಂದ ಮುನವಳ್ಳಿ ಅವರು ಮಾತನಾಡಿ, ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದುದು. ಇದನ್ನು ಶ್ರದ್ಧೆಯಿಂದ ಹಾಗೂ ನಿಷ್ಠೆಯಿಂದ ಮಾಡಬೇಕು ಎಂದರು.
ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ಪ್ರಶಿಣಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಾಚಾರ್ಯ ಡಾ. ಲಿಂಗರಾಜ ಮುಳ್ಳಳ್ಳಿ ಸ್ವಾಗತಿಸಿದರು. ಪ್ರಶಿಣಾರ್ಥಿ ಸೌಮ್ಯ ಚೌಕಿಮಠ ಪ್ರಾರ್ಥನೆ ಹಾಡಿದರು. ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ವೀರೇಶ ಕಲಕೇರಿ ವಾರ್ಷಿಕ ವರದಿ ವಾಚಿಸಿದರು. ದಿವ್ಯಾ ಬಿ. ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಮಹೇಶ ರಾಠೋಡ ಹಾಗೂ ಮಹಿಳಾ ವಿಭಾಗದ ಕಾರ್ಯದರ್ಶಿ ವಿನೋದಾ ಬಿಸೆರೊಟ್ಟಿ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net