

ಬೆಳಗಾವಿ:ಕೆಎಲ್‌ಇ ಸಂಸ್ಥೆಯ ಡಾ ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವು ಒಂದೇ ದಿನ ಎರಡು ಲೀವರ ಕಸಿ ಮಾಡಿ, ಸಾವಿನಂಚಿನಲ್ಲಿದ್ದವರ ಜೀವ ಉಳಿಸುವ ಅಪರೂಪದ ಸಾಧನೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಅಂಗಾಂಗ ಕಸಿಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಸಾಧನೆಯ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ಭಾಗದಲ್ಲಿ ಒಂದೇ ದಿನ ಎರಡು ಲೀವರ ಕಸಿ ಮಾಡಿದ ಸಾಧನೆ ಇದೇ ಪ್ರಥಮ.
ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಕಂಠ ನೀಲಕಂಟಪ್ಪ ಉಂಬರ್ಜೆ (60) ಎಂಬುವರು ಹಾಗೂ ಸವದತ್ತಿ ತಾಲೂಕಿನ ಹಿರೆಬುದ್ನೂರ ಗ್ರಾಮದ ಯುವಕ, ತವರು ಮನೆಯಲ್ಲಿರುವ ತನ್ನ ಗರ್ಭಿಣಿ ಹೆಂಡತಿಯ ಭೇಟಿಗಾಗಿ ತೆರಳುತ್ತಿರುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಣಮಂತ ಉದ್ದಪ್ಪಾ ಸರ‍್ವಿ (21) ಎಂಬ ಯುಕನೋರ್ವನ ಮೆದುಳು ಮೃತಗೊಂಡ ನಂತರ ತಮ್ಮ ಅಂಗಾAಗಳನ್ನು ದಾನ ಮಾಡಿದ್ದರು. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಬಾಗಲಕೋಟೆಯ ಪೊಲೀಸ್ ಸಿಬ್ಬಂದಿಗೆ ಹಾಗೂ 63 ವರ್ಷದ ಮಂಗಳೂರಿನ ರೋಗಿಗಳಿಗೆ ಲೀವರ ಕಸಿ ಮಾಡಲಾಗಿದೆ.
ಯುವಕ ನೀಡಿದ ಎರಡು ಕಿಡ್ನಿಗಳಲ್ಲಿ ಒಂದನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿನ ಮುಧೋಳದ ರೋಗಿಗೆ ಕಸಿ ಮಾಡಿದರೆ, ಇನ್ನೊಂದನ್ನು ಹುಬ್ಬಳ್ಳಿಯ ಆಸ್ಪತ್ರೆಯಲ್ಲಿನ ರೋಗಿಗೆ ನೀಡಲಾಯಿತು. ಲೀವರ ಹಾಗೂ ಕಿಡ್ನಿ ಕಸಿಗೊಳಗಾದ ಮೂವರು ಗುಣಮುಖರಾಗುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಗ್ಯಾಸ್ಟೊçಎಂಟ್ರಾಲಾಜಿ ಮುಖ್ಯಸ್ಥರಾದ ಡಾ. ಸಂತೋಷ ಹಜಾರೆ ಅವರು ಹೇಳಿದ್ದಾರೆ.
ಲೀವರ ಸೇರಿದಂತೆ ಅಂಗಾAಗಗಳ ಕಸಿ ಮಾಡಲು ಅತ್ಯಾಧುನಿಕ ಬೃಹತ್ ವೈದ್ಯಕೀಯ ಮೂಲಸೌಕರ್ಯ, ತರಬೇತಿ ಪಡೆದ ವೃತ್ತಿನಿರತ ಕಾರ್ಯಪಡೆ, ನಿಖರವಾದ ಯೋಜನೆ, ಕಸಿ ನಂತರದ ತೀವ್ರ ನಿಗಾ ವಹಿಸಬೇಕಾಗಿರುತ್ತದೆ. ವೃತ್ತಿನಿರತ ತಂಡದ ಕರ‍್ಯಕ್ಕೆ ಆಡಳಿತಾತ್ಮಕ ಸಹಕಾರದ ಅಗತ್ಯವೂ ಅಷ್ಟೇ ಮುಖ್ಯವಾಗಿರುತ್ತದೆ. ಅದೆಲ್ಲ ಇಲ್ಲಿ ಸಮ್ಮಿಳಿತಗೊಂಡಿದೆ. ಆದ್ದರಿಂದಲೇ ಒಂದೇ ದಿನ 2 ಲೀವರ ಹಾಗೂ 1 ಕಿಡ್ನಿ ಕಸಿ ಮಾಡಲು ಸಾಧ್ಯವಾಗಿದೆ. ಉತ್ತರ ಕರ್ನಾಟಕ ಮತ್ತು ಗೋವಾ ರಾಜ್ಯವನ್ನೊಳಗೊಂಡAತೆ ಏಕೈಕ ಕೇಂದ್ರ ಇದು ಎಂದು ತಿಳಿಸಿದ್ದಾರೆ.
ಅಂಗಾAಗ ದಾನ ಮಾಡಿದ ಕುಟುಂಬ ಸದಸ್ಯರ ಕರ‍್ಯವನ್ನು ಶ್ಲಾಘಿಸಿದ ಕೆಎಲ್‌ಇ ಸಂಸ್ಥೆಯ ಕರ‍್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು, ಓರ್ವ ವ್ಯಕ್ತಿಯು ನೀಡುವ ಅಂಗಾAಗದಿAದ ಇನ್ನೊಬ್ಬರಿಗೆ ಪ್ರೇರೆಪಿಸುತ್ತದೆ. ಅಲ್ಲದೇ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಭಾಗದ ಯಾವುದೇ ರೋಗಿಯು ಒಳ್ಳೆಯ ಗುಣಮಟ್ಟದ, ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಯಿಂದ ವಂಚಿತರಾಗಬಾರದು ಹಾಗೂ ವೈದ್ಯಕೀಯ ಸೇವೆಗಳೆಲ್ಲವನ್ನೂ ಕೈಗೆಟುಕುವ ದರದಲ್ಲಿ ಲಭಿಸುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಬೆಳಗಾವಿ- ಹುಬ್ಬಳ್ಳಿ ದಾರವಾಡ ಪೋಲೀಸ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರದಿಂದ ರಾಷ್ಟಿçÃಯ ಹೆದ್ದಾರಿಯ ಹಸಿರು ಪಥದಲ್ಲಿ ಧಾರವಾಡ ಎಸ್‌ಡಿಎಂ ಆಸ್ಪತ್ರೆಯಿಂದ ಲೀವರ್ ಅನ್ನು ತರಲಾಯಿತು. ಪೊಲೀಸರ ಕರ‍್ಯಕ್ಕೆ ನಮ್ಮದೊಂದು ಸಲಾಮ ಹಾಗೂ ಹೃದಯಪೂರ್ವಕ ಧನ್ಯವಾದಗಳು.
ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಡಾ. ಸಂತೋಷ ಹಜಾರೆ, ಲೀವರ ಕಸಿ ಶಸ್ತçಚಿಕಿತ್ಸಕರಾದ ಡಾ. ಸುದರ್ಶನ ಚೌಗಲೆ ಅವರು ಯಶಸ್ವಿ ಶಸ್ತçಚಿಕಿತ್ಸೆ ನೆರವೇರಿದ್ದಾರೆ. ಯಶಸ್ವಿ ಕಸಿ ಶಸ್ತçಚಿಕಿತ್ಸೆ ನೆರವೇರಿಸಿದ ವೈದ್ಯರ ತಂಡವನ್ನು ಕೆಎಲ್‌ಇ ಸಂಸ್ಥೆಯ ಕರ‍್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ ದಯಾನಂದ ಅವರು ಅಭಿನಂದಿಸಿದ್ದಾರೆ.