ರಾಜ್ಯದಲ್ಲಿ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕು; ಡಾ.‌ಪ್ರಭಾಕರ ಕೋರೆ

IMG-20241120-WA0015.jpg
Published on

ಬೆಳಗಾವಿ: ಉತ್ತರ ಕರ್ನಾಟಕದ ಭಾಗದ ಜನರು ಸಹಕಾರ ಸಂಘದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾವುದೇ ತಾರತಮ್ಯ ಇಲ್ಲದೇ ನಿಷ್ಠಾವಂತ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರಿ ಚಳುವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಿದೆ ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು.

ನಗರದ‌ಕೆಎಲ್ಇ ಡಾ.ಬಿ.ಎಸ್.ಜಿರಗೆ ಸಭಾಂಗಣದಲ್ಲಿ ಬುಧವಾರ ನಡೆದ 71ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ದಲ್ಲಿ ಮಾತನಾಡಿದ ಅವರು, ಸಹಕಾರಿ ಸಂಘಗಳಿಂದ ದೇಶದ ಆರ್ಥಿಕತೆಗೆ ಬಹಳಷ್ಟು ಬಲ ಬಂದಿದೆ. ರಾಜ್ಯದಲ್ಲಿ ಸಹಕಾರಿ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕು ಅದೇ ರೀತಿಯಲ್ಲಿ ಜಿಲ್ಲೆಯಲ್ಲಿ ಮಹಾ ವಿದ್ಯಾಲಯವಾಗಬೇಕು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಸಹಕಾರ ಕ್ಷೇತ್ರವಿಲ್ಲದೆ ರಾಜ್ಯ, ದೇಶ ರೈತರ ಪ್ರಗತಿ ಸಾಧ್ಯವಿಲ್ಲ. ಗದಗ ಜಿಲ್ಲೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ರೈತರಿಗೆ ಅನುಕೂಲವಾಗಲು ಸಹಕಾರ ಕ್ಷೇತ್ರ ಪ್ರಾರಂಭವಾಯಿತು. ಸಾಲದ ನೆರವು ನೀಡದೆ ಹೋದರೆ ರೈತಾಪಿ ವರ್ಗಕ್ಕೆ ಆರ್ಥಿಕ ಕಷ್ಟವಾಗುತ್ತಿತ್ತು. ಜವಾಹರ್ ಲಾಲ್ ನೆಹರೂ ಅವರ ಜನ್ಮ ದಿನದ ನಿಮಿತ್ಯ ನವಂಬರ್ 14 ರಿಂದ 7 ದಿನಗಳ ಕಾಲ ಸಹಕಾರ ಸಪ್ತಾಹ ಏರ್ಪಡಿಸಲಾಗುವುದು ಎಂದು ಹೇಳಿದರು.

ಹಾಲು ಮಾರಾಟ, ನೇಕಾರ, ರೈತರು, ಸೌಹಾರ್ದ, ಮಹಿಳಾ ಸೊಸೈಟಿ ಸೇರಿದಂತೆ ಎಲ್ಲ ವರ್ಗದಲ್ಲಿ ಸಹಕಾರ ಕ್ಷೇತ್ರ ಬೆಳೆದು ನಿಂತಿದೆ. ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಅದೇ ರೀತಿಯಲ್ಲಿ ಸಹಕಾರ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಹೊಂದಿಬೇಕು. ಸಹಕಾರ ಸಂಘಗಳು ಜನರ ವಿಶ್ವಾಸ ಉಳಿಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net