

ಬೆಳಗಾವಿ: ನಗರದ ಕೆಎಲ್ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕನ್ನಡ ನುಡಿ ವೈಭವಕ್ಕೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಚಾಲನೆ ನೀಡಿದರು.
ವಿಧಾನಪರಿಷತ್ ನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಹಾವೇರಿ ವಿವಿ ಕುಲಸಚಿವೆ ಡಾ. ವಿಜಯಲಕ್ಷ್ಮಿ ತಿರ್ಲಾಪುರ, ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಲಿಂಗೌಡ ದೇಸಾಯಿ ಇತರರಿದ್ದರು.