ಪಟ್ಟಣದ ಅಭಿವೃದ್ಧಿಗೆ ಕೈಜೋಡಿಸಿ

25Kdr1
Published on

ಕಡೂರು: ಪಟ್ಟಣದ ಪ್ರಮುಖ ವೃತ್ತದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಪುರಸಭೆಯಿಂದ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಪಟ್ಟಣದಲ್ಲಿ ಕೆಎಲ್‌ವಿ ವತ್ತದ ಬಳಿಯ ಗಣಪತಿ-ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದ ಟಾರ್ ರಸ್ತೆ ನಿರ್ಮಾಣದ ಪ್ರಗತಿ ಕಾಮಗಾರಿ ವೀಕ್ಷಿಸಿ ಮಾತನಾಡಿ, ಈಗಾಗಲೇ ರಸ್ತೆಯ ಒಂದು ಭಾಗ ಅಗಲೀಕರಣ ಮಾಡಲಾಗಿದ್ದು, ಸುರಕ್ಷಿತವಾಗಿ ಚರಂಡಿ ಮೂಲಕ ನೀರು ಹರಿಯಲು ವ್ಯವಸ್ಥೆ ಮಾಡಲಾಗಿದೆ. ಜತೆಗೆ ಡಾಂಬರ್ ರಸ್ತೆಯನ್ನು ನಿರ್ಮಿಸಲಾಗಿದೆ ಎಂದರು.

ಯಾವುದೇ ಕಾಮಗಾರಿ ನಡೆಯಲು ಸಾರ್ವಜನಿಕರ ಸಹಕಾರ ಅತಿ ಮುಖ್ಯವಾಗಲಿದೆ. ಸಾರ್ವಜನಿಕರು, ಬಡಾವಣೆ ನಿವಾಸಿಗಳು ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಿದರೆ ಅಭಿವೃದ್ಧಿಗೆ ಒತ್ತು ನೀಡಲು ಸಹಕಾರಿಯಾಗಲಿದೆ. ಪಟ್ಟಣದ ಅಭಿವೃದ್ಧಿ ದೃಷ್ಠಿಯಿಂದ ಪುರಸಭೆ ಅಧಿಕಾರಿಗಳಿಗೆ ಸ್ಪಂದಿಸುವ ಕೆಲಸಕ್ಕೆ ಸಾರ್ವಜನಿಕರು ಸಹಕರಿಸಬೇಕಿದೆ ಎಂದರು.

ಪುರಸಭೆ ಸದಸ್ಯರಾದ ಸೈಯಾದ್ ಯಾಸಿನ್, ಮರುಗುದ್ದಿಮನು, ಮುಖ್ಯಾಧಿಕಾರಿ ಕೆ.ಎಸ್.ಮಂಜುನಾಥ್, ಇಂಜಿನಿಯರ್ ಜಗದೀಶ್, ಚಿನ್ನರಾಜ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net